ಬೆಂಗಳೂರು : ವಾಟ್ಸಾಪ್‌ನಲ್ಲಿ ಹುಡುಗಿಯಂತೆ ಚಾಟ್ ಮಾಡಿ ಲೈಂಗಿಕ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಅನಿತಾ ಎಂಬ ಯುವತಿಯ ಹೆಸರಲ್ಲಿ ವ್ಯಕ್ತಿಯೋರ್ವನನ್ನು ಸಂಪರ್ಕಿಸಿದ್ದ ಆರೋಪಿ, ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದಾನೆ.
ಬಳಿಕ ಫೋಟೊ ಮಾರ್ಫ್ ಮಾಡಿ ಚಾಟ್ ಸಮೇತ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ದೂರಿನ ಮೇರೆಗೆ ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಲಾಗಿದೆ.


