ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಸೂಚಿಸಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಣ ಸಭಾಂಗಣದಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಎಸ್. ಎಸ್. ಟಿ ಹಾಗೂ ಎ. ಎಸ್. ಟಿ ತಂಡಗಳು 3 ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾ ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಣ ಸಭಾಂಗಣದಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದರು. ಚುನಾವಣಾಧಿಕಾರಿ ಕೆ. ಎ. ದಯಾನಂದ ಮಾತನಾಡಿ, ದಾಖಲೆಗಳಿಲ್ಲದ ಹಣ, ಮದ್ಯ, ಮಾದಕದ್ರವ್ಯಗಳ ಮೇಲೆ ನಿಗಾವಹಿಸಲಾಗುತ್ತಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


