nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಪಿಎಲ್ ಪಡಿತರ ಚೀಟಿ ರದ್ದತಿಗೂ ಮುನ್ನ ಪರಿಶೀಲಿಸಿ: ಗೋವಿಂದ ಎಂ. ಕಾರಜೋಳ
    ತುಮಕೂರು November 20, 2024

    ಬಿಪಿಎಲ್ ಪಡಿತರ ಚೀಟಿ ರದ್ದತಿಗೂ ಮುನ್ನ ಪರಿಶೀಲಿಸಿ: ಗೋವಿಂದ ಎಂ. ಕಾರಜೋಳ

    By adminNovember 20, 2024No Comments2 Mins Read
    govinda karajola

    ತುಮಕೂರು:  ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಶಿರಾ ಮತ್ತು ಪಾವಗಡ ತಾಲ್ಲೂಕುಗಳ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗದಂತೆ ಸರ್ಕಾರದ ನಿಯಮಾವಳಿಯನ್ವಯ ಅನರ್ಹ ಬಿಪಿಎಲ್ ಕಾರ್ಡುಗಳ ರದ್ದತಿ ಬಗ್ಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ 12,804 ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದ್ದು. ರದ್ದುಗೊಳಿಸುವ ಸಂದರ್ಭದಲ್ಲಿ ಅರ್ಹ ಪಡಿತರ ಚೀಟಿಗಳು ರದ್ದಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.

    ಜಿಲ್ಲೆಯ ರೈತರು ಬೇಸಿಗೆಯಲ್ಲೂ ಸಹ ಬೆಳೆಗಳನ್ನು ಬೆಳೆಯುವ ನಿರೀಕ್ಷೆಯಿದ್ದು, ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆಯಾಗುತ್ತಿರುವುದರಿಂದ ಬೇಸಿಗೆಯಲ್ಲಿ ವಿದ್ಯುತ್ ಸರರಾಜಿನಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 1,71,435 ಫಲಾನುಭವಿಗಳಿಗೆ 18,085 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಕೃಷಿ ಯಾಂತ್ರೀಕರಣ, ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೇರಿದಂತೆ ಎಲ್ಲಾ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಗತಿ ಸಾಧಿಸಲಾಗುತ್ತಿದೆ ಎಂದು ಕೃಷಿ ಜಂಟಿ ನಿರ್ದೇಶಕ ರಮೇಶ್ ಸಭೆಗೆ ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ 5.73 ಲಕ್ಷ ಜಾನುವಾರುಗಳಿದ್ದು, ಶಿರಾ ಮತ್ತು ಪಾವಗಡ ತಾಲ್ಲೂಕಿನಲ್ಲಿ 97 ಸಾವಿರ ಜಾನುವಾರುಗಳಿವೆ. ಜಿಲ್ಲೆಯು ಹಾಲು ಉತ್ಪಾದನೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನದಲ್ಲಿದ್ದು, 8 ರಿಂದ 10 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಕುರಿ, ಮೇಕೆ, ಹಂದಿ ಸಾಕಾಣಿಕೆಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವೆ ಇಲಾಖೆ ಉಪ ನಿರ್ದೇಶಕ ಡಾ.ಗಿರೀಶ್ ಬಾಬು ರೆಡ್ಡಿ ಸಭೆಗೆ ಮಾಹಿತಿ ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ನರೇಗಾ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿಗಾಗಿ 205 ಕೋಟಿ ರೂ. ವೆಚ್ಚದಲ್ಲಿ 3,614 ಕಾಮಗಾರಿ, ಮೂಲಭೂತ ಸೌಕರ್ಯಗಳಿಗಾಗಿ 90 ಕೋಟಿ ರೂ. ವೆಚ್ಚದಲ್ಲಿ 1,500 ಕಾಮಗಾರಿ ಹಾಗೂ ಸಮಗ್ರ ವೈಜ್ಞಾನಿಕ ಚರಂಡಿ ವ್ಯವಸ್ಥೆಗಾಗಿ 102 ಕೋಟಿ ರೂ. ವೆಚ್ಚದಲ್ಲಿ 6,170 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಸಮಗ್ರ ಶಾಲಾ ಅಭಿವೃದ್ಧಿ ಶೀರ್ಷಿಕೆಯಡಿ 1,424 ಶಾಲಾ ಕಾಂಪೌಂಡ್, 1,354 ಶೌಚಾಲಯ, 836 ಆಟದ ಮೈದಾನ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಹಸರೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕೃಷಿ, ಅರಣ್ಯೀಕರಣ, ನೆಡುತೋಪು, ಕಂದಕ ನಿರ್ಮಾಣ, ವೃಕ್ಷವನ ನಿರ್ಮಾಣಕ್ಕಾಗಿ 4,723 ಲಕ್ಷ ರೂ. ವೆಚ್ಚದಲ್ಲಿ 2,917 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಪಾವಗಡ ತಾಲ್ಲೂಕಿನ ಆಸ್ಪತ್ರೆಗಳಿಗೆ ತಜ್ಞ ವೈದ್ಯರ ಬೇಡಿಕೆಯಿದ್ದು, ತಜ್ಞ ವೈದ್ಯರಿಗೆ 1.50 ಲಕ್ಷ ರೂ.ಗಳ ಸಂಭಾವನೆ ನಿಗಧಿಯಾಗಿದೆ. ಸಂಭಾವನೆಯನ್ನು 2.50 ಲಕ್ಷ ರೂ.ಗಳಿಗೆ ನಿಗಧಿಪಡಿಸಿದರೆ ತಜ್ಞ ವೈದ್ಯರು ಸೇವೆ ಒದಗಿಸುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಚಂದ್ರಶೇಖರ್ ಸಭೆಗೆ ಮಾಹಿತಿ ನೀಡಿದಾಗ ಸಂಸದರು ಜಿಲ್ಲೆಯಲ್ಲಿ ಪಾವಗಡ ತಾಲ್ಲೂಕಿನಲ್ಲಿ ಕುಷ್ಠರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಕುಷ್ಠರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.