ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ನಟ ರಮೇಶ್ ಅರವಿಂದ ಅವರು, ನಾವೆಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವಕ್ಕೆ ಹೆಲೋ ಎಂದಾಗ ಒಟ್ಟಾಗಿ ಶೇ. 100 ರಷ್ಟು ಮತ ಚಲಾಯಿಸಿದಾಗ ಮಾತ್ರ ನಾವು ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಲು ಸಾಧ್ಯ ಎಂದು ಹೇಳಿದರು.

“ಯಾರದ್ದೋ ಮಾತು ಕೇಳಿ ಅಭ್ಯರ್ಥಿಗೆ ಮತ ಹಾಕಬೇಡಿ, ಕೂಲಂಕುಶವಾಗಿ ಪರಿಶೀಲಿಸಿ, ಗೂಗಲ್ ನಲ್ಲಿ ನಿಮ್ಮ ಕ್ಚೇತ್ರದ ಅಭ್ಯರ್ಥಿ ಬಗ್ಗೆ ಮಾಹಿತಿ ಪಡೆಯಿರಿ. ಏನೇನು ಕೆಲಸ ಮಾಡಿದ್ದಾರೆ, ಕಳೆದ 5 ವರ್ಷದಲ್ಲಿ ಯಾವೆಲ್ಲ ಕೆಲಸ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ವ್ಯಕ್ತಿಗೆ ಮತ ಹಾಕಿ, ನೀವೆಲ್ಲರೂ ಯುವ ಮತದಾರರಾಗಿದ್ದು, ತಮ್ಮ ಸ್ವಯಿಚ್ಛೆಯಿಂದ ಮತದಾನ ಮಾಡಲು” ಸಲಹೆ ನೀಡಿದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕಾಂತರಾಜು ರವರು ಮಾತನಾಡಿ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯುವ ಮತದಾರರು ಏಪ್ರಿಲ್ 26ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಮಾಡುವ ಅವಕಾಶವಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಲು ತಿಳಿಸಿದರು.
ಪ್ರತಿಜ್ಞಾ ವಿಧಿ ಸ್ವೀಕಾರ:
ಲೋಕಸಭಾ ಚುನಾವಣೆ ಹಿನ್ನೆಲೆ ಬಿಎಂಎಸ್ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತದಾನ ಪ್ರತಿಜ್ಙಾ ವಿಧಿಯನ್ನು ಸ್ವೀಕರಿಸಿ ಎಲ್ಲರೂ ತಪ್ಪದೆ ಮತದಾನ ಮಾಡುವುದಾಗಿ ತಿಳಿಸಿದರು. ಈ ವೇಳೆ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿಯಾದ ರಮಾಮಣಿ, ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ವಸುಂದರಾ ಸೇರಿದಂತೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


