ಗುಬ್ಬಿ: ಇಂದು ರಾಜ್ಯಾದ್ಯಂತ ಸಂವಿಧಾನ ದಿನಾಚರಣೆ ಆಚರಿಸಬೇಕು ಎಂದು ಸರ್ಕಾರದ ಆದೇಶವಿದ್ದರೂ ಗುಬ್ಬಿ ತಾಲೂಕಿನ ಚೇಳೂರು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ದಿನಾಚರಣೆ ಆಚರಿಸದೇ ನಿರ್ಲಕ್ಷ್ಯ ವಹಿಸಿರುವ ಘಟನೆ ನಡೆದಿದೆ.
ಪಂಚಾಯತ್ ನಡೆಯನ್ನು ಖಂಡಿಸಿ ಇಲ್ಲಿನ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ರಾಷ್ಟ್ರಮಟ್ಟದಲ್ಲಿ ಸಂವಿಧಾನ ದಿನಾಚರಣೆ ಆಚರಿಸುತ್ತಿದ್ದರೂ, ಚೇಳೂರು ಗ್ರಾಮ ಪಂಚಾಯತ್ ಉದ್ದೇಶ ಪೂರ್ವಕವಾಗಿ ಅಂಬೇಡ್ಕರ್ ಜಯಂತಿ ಆಚರಿಸದೇ ಸಂವಿಧಾನ ವಿರೋಧಿ ನೀತಿ ತೋರಿದೆ ಎಂದು ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.
ಪ್ರತಿಭಟನೆಯ ಬಿಸಿ ಮುಟ್ಟುತ್ತಿದ್ದಂತ ತಕ್ಷಣವೇ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಸದಸ್ಯರು, ಸಂವಿಧಾನ ದಿನ ಆಚರಿಸಲು ಮುಂದಾಗಿದ್ದಾರೆ. ಈ ವೇಳೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ದಲಿತ ಮುಖಂಡರಲ್ಲಿ ಕ್ಷಮೆಯಾಚಿಸಿ, ಇನ್ನು ಮುಂದೆ ಇಂತಹ ಘಟನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700