ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಬರಮಾಡಿಕೊಂಡು ಬೀಳ್ಕೊಡುಗೆ ಮಾಡಿದರು.

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಲ್ಲೂಕಿನ ಅಂಚೆಪಾಳ್ಯ ರಾಷ್ಟ್ರೀಯ ದಾರಿ 75 ರ ಮೂಲಕ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡು ಸಿದ್ದೇಶ್ವರ ಅಜ್ಜಯ್ಯನ ಮಠಕ್ಕೆ ತೆರಳುವ ಮಾರ್ಗ ಮಧ್ಯೆ ಕುಣಿಗಲ್ ತಾಲ್ಲೂಕಿನ ಗಡಿ ಗ್ರಾಮವಾದ ಅಂಚೆಪಾಳ್ಯದ ಕೈಗಾರಿಕಾ ವಲಯದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ನೇತೃತ್ವದಲ್ಲಿ ಕುಣಿಗಲ್ ತಾಲ್ಲೂಕಿನ ಸಾವಿರಾರು ಅಭಿಮಾನಿಗಳು ನೂತನ ಮುಖ್ಯಮಂತ್ರಿಗಳನ್ನ ಸ್ವಾಗತಿಸಿ ಬೃಹದಾಕಾರವಾದ ಸೇಬಿನ ಹಾರವನ್ನ ಹಾಕಿ ಪಟಾಕಿ ಸಿಡಿಸಿ ಡಿ.ಕೆ., ಡಿ.ಕೆ., ಎಂdu ಮುಖ್ಯಮಂತ್ರಿಗೆ ಜಯ ಘೋಷಣೆ ಕೂಗಿದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರು, ನೆರೆದಿದ್ದ ಕಾರ್ಯಕರ್ತರತ್ತ ಕೈ ಬಿಸಿ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೋಗಟ್ಟ ರಾಜಣ್ಣ, ಕೆಪಿಸಿಸಿ ಸದಸ್ಯರಾದ ಬೇಗೂರು ನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬೆನವಾರ ಶೇಷಣ್ಣ, ಕಾಂಗ್ರೆಸ್ ಮುಖಂಡರಾದ ಸುಂದರಕುಪ್ಪೆ ಪಾಪಣ್ಣ,ಯಡಿಯೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಧುಸೂದನ್, ಬೇಗೂರು ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಗೌಡ, ಅಂಚೆಪಾಳ್ಯ ಕುಮಾರ್, ಲೋಹಿತ್ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಪಟಾಕಿ ಹಾಗೂ ಸಿಹಿ ಹಂಚಿ ಸಂಭ್ರಮಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


