nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ February 23, 2026

    ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    By adminFebruary 23, 2026No Comments3 Mins Read
    cm siddaramaiah

    ಕಾರವಾರ: ಅಂಕೋಲಾ ಮತ್ತು ಕುಮಟಾ ತಾಲೂಕಿನ ಜನತೆಯ ಬಹಳ ದಿನದ ಬೇಡಿಕೆಯಾದ, ಅಂಕೋಲಾದ ಮಂಜಗುಣಿ ಮತ್ತು ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ರೂ.34.21 ಕೋಟಿ ವೆಚ್ಚದ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಿದರು.

    ನಂತರ ಮಾತನಾಡಿದ ಅವರು, ಗಂಗಾವಳಿ ನದಿಯನ್ನು ದಾಟಲು ಬಹಳ ಕಷ್ಟ. ಮಳೆಗಾಲದಲ್ಲಿ ನದಿಯನ್ನು ದಾಟಲು ಸಾಧ್ಯವಿಲ್ಲ. ಈ ಭಾಗದ ಜನರು ಸೇತುವೆ ನಿರ್ಮಾಣಕ್ಕಾಗಿ ಬೇಡಿಕೆ ಮತ್ತು ಹೋರಾಟಗಳನ್ನು ಮಾಡಿದ್ದರು. 2017 ರಲ್ಲಿ ಇಲ್ಲಿಗೆ ಭೇಟಿ ನೀಡಿ, ಪರಿಶೀಲಿಸಿ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದೆ, ನಾನೇ ಶಂಕುಸ್ಥಾಪನೆ ಮಾಡಿದ ಸೇತುವೆಯನ್ನು ಈಗ ಉದ್ಘಾಟಿಸುತ್ತಿರುವುದು ಬಹಳ ಸಂತೋಷವಾಗುತ್ತಿದೆ ಎಂದರು.


    Provided by
    Provided by

    ಬಹಳ ಹಿಂದೆಯೇ ಈ ಸೇತುವೆ ಪೂರ್ಣಗೊಳ್ಳಬೇಕಿತ್ತು ಆದರೆ ಕಾರಣಾಂತರದಿAದ ಹಿಂದಿನ ಸರ್ಕಾರ ಆಸಕ್ತಿ ವಹಿಸದಿದ್ದರಿಂದ ಈ ಸೇತುವೆ ಉದ್ಘಾಟನೆ ಮಾಡಲು ವಿಳಂಭವಾಯಿತು. ಒಂದು ವೇಳೆ ಸೇತುವೆಯಾಗದಿದ್ದರೆ ಸುಮಾರು 18 ಕಿ.ಮೀ. ಬಳಸಿ ಈ ಭಾಗದ ಜನರು ಗಂಗಾವಳಿ ಗ್ರಾಮವನ್ನು ತಲುಪಬೇಕಾಗಿತ್ತು. ಈ ಸೇತುವೆ ನಿರ್ಮಾಣದಿಂದ ಈ ಭಾಗದ ಜನರಿಗೆ ಅನುಕೂಲವಾಗಿದ್ದು, ಗೋಕರ್ಣ ಮತ್ತು ಅಂಕೋಲಾ ಭಾಗದ ಜನರ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ ಎಂದರು.

    ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ, ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

    ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಜನರಿಗೆ ನಾನು ಏನು ಮಾಡಿದ್ದೇನೆ ಎಂಬುದನ್ನು ಮರೆತು ಮುಂದೆ ಏನು ಮಾಡಬೇಕು ಎಂಬುದನ್ನು ಯೋಚಿಸಬೇಕು. ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ಜನರಿಗೆ ಏನು ಮಾಡಬೇಕು ಎಂಬುದು ಮುಖ್ಯವಾಗಿದೆ ಎಂದರು.

    ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತಿಯೊಂದು ಕ್ಷೇತ್ರವನ್ನು ಅಭಿವೃದ್ಧಿಪಥಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ. ಕಲ್ಲುಗಳಿಂದ ಗೋಡೆನು ಕಟ್ಟಿಕೊಳ್ಳಬಹುದು, ಸೇತುವೆಯನ್ನು ಕಟ್ಟಬಹುದಾಗಿದೆ ಆ ಸೇತುವೆ ಒಂದು ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತದೆ. ಆದರೆ ಗೋಡೆ ಇಬ್ಬರನ್ನು ಇಬ್ಬಾಗ ಮಾಡುತ್ತದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಪ್ರವಾಸಿಗರಿಗೆ ಮತ್ತು ಹೂಡಿಕೆದಾರರಿಗೆ ಅನುಕೂಲವಾಗುವ ಹೊಸ ಪ್ರವಾಸಿ ನೀತಿ ರೂಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಲ್ಲಿಯೇ ಉದ್ಯೋಗ ಸೃಷ್ಠಿಸಿ ಸ್ಥಳೀಯರಿಗೆ ಉದ್ಯೋಗ ಕಲ್ಪಸಲಾಗುವುದು. 360 ಕಿ.ಮೀ ರಾಜ್ಯದ ಕರಾವಳಿ ತೀರ ಪ್ರದೇಶ ಪ್ರಕೃತಿ ಸೋಗಡು ರಾಜ್ಯ ಮತ್ತು ದೇಶಕ್ಕೆ ದೊಡ್ಡ ಆಸ್ತಿಯಾಗಿದೆ. ಈ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೊಸ ಯೋಜನೆ ರೂಪಿಸಲಾಗಿದೆ ಎಂದರು.

    ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್ ಮಾತನಾಡಿ, 45 ದಶಕದಿಂದ ಈ ಭಾಗದಲ್ಲಿ ಸೇತುವೆ ಮಾಡಲು ಜನರ ಬೇಡಿಕೆ ಇದ್ದರೂ ಕೂಡ ಸೇತುವೆ ನಿರ್ಮಾಣ ಕೇವಲ ಪ್ರಣಾಳಿಕೆಯಲ್ಲಿ ಸಿಮಿತವಾಗಿತ್ತು. ಆದರೆ 2017 ರಲ್ಲಿ ಈ ಸೇತುವೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಮಾಡಿದರು. ಈಗ ಅವರೇ ಉದ್ಘಾಟನೆ ಮಾಡುತ್ತಿರುವುದು ಸಂತೋಷವಾಗಿದೆ. ಇದರಿಂದ ಈ ಭಾಗದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗಿದೆ. ನನಗೆ ಜನರ ಕೆಲಸ ಮಾಡುವುದೇ ನನ್ನ ಆದ್ಯ ಕರ್ತವ್ಯವಾಗಿದೆ. ಕಾರವಾರದಲ್ಲಿ ಈಗಾಗಲೇ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆಯಾಗಿದೆ. ಜಿಲ್ಲೆಯ ಜನರ ಬಹು ಬೇಡಿಕೆಯ ಸೂಪರ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಜೆಟ್ ನಲ್ಲಿ ಘೋಷಣೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

    ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬುದು ಬಹು ದಿನದ ಬೇಡಿಕೆಯಾಗಿದೆ. ಜಿಲ್ಲೆಯಲ್ಲಿ ಕುಣುಬಿ ಸಮಾಜದವರು ಬಹಳಷ್ಟು ಮಂದಿ ಇದ್ದು, ಪಕ್ಕದ ಗೋವಾ ರಾಜ್ಯದಲ್ಲಿ ಕುಣುಬಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದಾರೆ. ಅದೇ ರೀತಿ ರಾಜ್ಯದಲ್ಲಿಯೂ ಕುಣುಬಿ ಮತ್ತು ಹಾಲಕ್ಕಿ ಒಕ್ಕಲಿಗರನ್ನು ಕುಣುಬಿ ಸಮಾಜವನ್ನು ಪರಿಶಿಷ್ಟ ಪಂಗಕ್ಕೆ ಸೇರಿಸಬೇಕು ಎಂದು ಮನವಿ ಮಾಡಿದರು.

    ಶಾಸಕ ದಿನಕರ ಕೆ ಶೆಟ್ಟಿ ಮಾತನಾಡಿ, ಗೋಕರ್ಣಕ್ಕೆ ಪ್ರತಿ ದಿನ 50 ರಿಂದ 60 ಸಾವಿರ ಜನ ಪ್ರವಾಸಿಗರು ಆಗಮಿಸುತ್ತಿದ್ದು, ಗ್ರಾಮ ಪಂಚಾಯತಿ ವತಿಯಿಂದ ಇಲ್ಲಿನ ಸ್ವಚ್ಚತೆ, ಕುಡಿಯುವ ನೀರಿನ ಸಮಸ್ಯೆ ನಿಯಂತ್ರಿಸಲು ಸಾಧ್ಯವಿಲ್ಲ ಹೀಗಾಗಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸುವಂತೆ ಮನವಿ ಮಾಡಿದರು.

    ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್.ವಿ ದೇಶಪಾಂಡೆ, ಶಾಸಕ ಭೀಮಣ್ಣ ಟಿ. ನಾಯ್ಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಮತ್ತಿತರರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.