nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    • ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟ ಕೋಟ್ಯಂತರ ವೆಚ್ಚದ ಹಾಸ್ಟೆಲ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿಗಳ ಆಕ್ರೋಶ
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
    Uncategorized December 20, 2024

    87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

    By adminDecember 20, 2024No Comments2 Mins Read
    mandya

    ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

    ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.


    Provided by
    Provided by

    ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.  ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.

    ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

    ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ:

    ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.

    ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.

    ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.

    ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

    ಮಂಡ್ಯ ನಗರದಲ್ಲಿ  ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದರು.

    ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.


     

    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಕೊರಟಗೆರೆ: ಮನೆಯ ಮುಂದಿನ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಒಂದು ಕಾರು ಮತ್ತು ಎರಡು ಬೈಕ್‌ಗಳಿಗೆ ಕಿಡಿಗೇಡಿಯೋರ್ವ ಬೆಂಕಿ ಹಚ್ಚಿ ಪರಾರಿಯಾಗಿರುವ…

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.