ಬೀದರ್: ಬೀದರ್ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ ಕಪಿಲದೇವ್ ಹಾಗೂ ಬೀದರ ಜಿಲ್ಲೆಯ ಮಂಠಾಳ, ಬ.ಕಲ್ಯಾಣ ಸಂಚಾರಿ, ಪ್ರಸ್ತುತ ಮುಡುಬಿ ಪೊಲೀಸ್ ಠಾಣೆಯ ಪಿ.ಎಸ್.ಐ. ಜಯಶ್ರೀ ಅವರು ತಮ್ಮ ಪ್ರಾಮಾಣಿಕತೆ ದಕ್ಷತೆಗಾಗಿ ಮುಖ್ಯಮಂತ್ರಿ ಪದಕ ಪಡೆದುಕೊಂಡಿದ್ದಾರೆ.
ಇವರ ಸಾಧನೆಗೆ ಬೀದರ್ ಜಿಲ್ಲಾ ಪೊಲೀಸರು ಅಭಿನಂದಿಸಿದ್ದು, ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡಿ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿ ಮುಖ್ಯಮಂತ್ರಿ ಪದಕ ಪಡೆದುಕೊಂಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಸಾಧನೆ ಬೀದರ್ ಜಿಲ್ಲಾ ಪೊಲೀಸರ ಹೆಮ್ಮೆಯಾಗಿರುತ್ತದೆ. ಮುಂದೆಯು ಕೂಡ ಇದೆ ರೀತಿಯ ಸೇವೆ ಸಮಾಜಕ್ಕೆ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಆಶಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


