ತುಮಕೂರು: ನಗರದ ವಾರ್ಡ್ ನಂ.3ರ ಶಿರಾಗೇಟ್ ನ 80 ಅಡಿ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಇದರಿಂದಾಗಿ ಸಾರ್ವಜನಿಕರ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಕೂಡಲೇ ಸರಿಪಡಿಸುವಂತೆ ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗಕ್ಕೆ ಕೋರಿದ್ದರು. ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಹಳೆಯ ಎನ್ ಹೆಚ್ — 4 ರ ರಸ್ತೆಯ ಎಸ್ ಮಾಲ್ ಮುಂಭಾಗ ಅಮಾನಿಕೆರೆ ನೀರು ಹರಿಯಲು ಸೇತುವೆ ನಿರ್ಮಾಣಕ್ಕಾಗಿ ರಸ್ತೆಯನ್ನು ಬಂದ್ ಮಾಡಲಾಗಿರುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ವಾಹನಗಳು ಸದರಿ ರಸ್ತೆಯಲ್ಲಿ ಸಂಚರಿಸಿರುವುದರಿಂದ ರಸ್ತೆಯು ಗುಂಡಿ ಬಿದ್ದು ಹಾಳಾಗಿರುತ್ತದೆ. ಜುಲೈ ತಿಂಗಳಲ್ಲೇ ಈ ರಸ್ತೆ ಗುಂಡಿಗಳನ್ನು ಮುಚ್ಚಿಸಲಾಗಿದೆ.
ಆದರೆ, ಎಸ್ ಮಾಲ್ ಬಳಿ ಸೇತುವೆ ಕಾಮಗಾರಿಯು ಮುಕ್ತಾಯಗೊಳ್ಳುವುದು ನಿಧಾನವಾದ್ದರಿಂದ, ಸದರಿ ರಸ್ತೆಯಲ್ಲಿ ಸಂಚರಿಸಬೇಕಾಗಿದ್ದ ಎಲ್ಲಾ ವಾಹನಗಳು ಐಡಿಎಸ್‌ಎಂಟಿ ಮುಖ್ಯರಸ್ತೆಯನ್ನೇ ಬಳಸಿಕೊಂಡು ಸಂಚರಿಸುತ್ತಿರುವುದರಿಂದ ರಸ್ತೆಯು ಹಾಳಾಗಿರುತ್ತದೆ. ಆದ್ದರಿಂದ ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಲು ಪಾಲಿಕೆ ವತಿಯಿಂದ ಟೆಂಡರ್ ಆಹ್ವಾನಿಸಿ ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx