ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದು, ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದಿದ್ದಾರೆ.
ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳು ಊಹಾಪೋಹಗಳನ್ನು ಹರಡುವ ಬದಲು ಸತ್ಯವನ್ನು ತೋರಿಸಬೇಕು. ಸ್ವತಃ ನಾನೇ ಸ್ಪಷ್ಟನೆ ನೀಡಿದರು, ಇನ್ನೂ ನಾಯಕತ್ವ ಬದಲಾವಣೆ ವಿಚಾರ ಸುದ್ದಿಯಾಗುತ್ತಿದೆ. ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭೇಟಿ ನೀಡಿದ್ದು, ಕೆಪಿಸಿಸಿ, ಹಾಗೂ ಸಿಎಲ್ ಪಿ ಸಭೆ ಸೇರಿದಂತೆ ಪಕ್ಷದ ಸರಣಿ ಸಭೆಗಳು ನಡೆಯುತ್ತಿವೆ. ಸಭೆಗೆ ಸುರ್ಜೇವಾಲಾ ಕೂಡ ಭಾಗಿಯಾಗಿದ್ದಾರೆ.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, ಬಿಜೆಪಿ ತನ್ನ ಆಂತರಿಕ ಸಮಸ್ಯೆಗಳನ್ನು ಮೊದಲು ಪರಿಹರಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಒಗ್ಗಟ್ಟಾಗಿದೆ. ಸಿದ್ದರಾಮಯ್ಯ ಸಿಎಂ. ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೂ ಅದನ್ನು ಪಕ್ಷದ ನಾಯಕತ್ವ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ತೆಗೆದುಕೊಳ್ಳುತ್ತಾರೆಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx