ಬೆಳಗಾವಿ: 2021 ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕೆಲವು ಗ್ರಾಮ ಪಂಚಾಯತಿಗಳನ್ನು ಬಡ್ತಿ ನೀಡಿ ಗ್ರಾಮ ಪಂಚಾಯತದಿಂದ ಪಟ್ಟಣ ಪಂಚಾಯತ ಎಂದು ಸರ್ಕಾರ ಆದೇಶ ಮಾಡಿತ್ತು. ಆದರೆ ಪೀರನವಾಡಿ ಪಟ್ಟಣ ಪಂಚಾಯತ್ ಜನಪ್ರತಿನಿಧಿಗಳು ಇಲ್ಲದೆ ಅಧಿಕಾರಿಗಳು ಯದ್ವಾ ತದ್ವಾ ಅಧಿಕಾರ ನಡೆಸುತ್ತಿದ್ದಾರೆ.
ಪೀರನವಾಡಿ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಹಾಗೂ ಸಿಬ್ಬಂದಿ ಮನಬಂದಂತೆ ಅಧಿಕಾರ ನಡೆಸುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಇಲ್ಲ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಾ ಇಲ್ಲ, ಆದಷ್ಟು ಬೇಗ ಪಟ್ಟಣ ಪಂಚಾಯತ್ ಚುನಾವಣೆ ನಡೆಸಬೇಕು ಮತ್ತು ಮುಖ್ಯ ಅಧಿಕಾರಿ ಹನುಮಂತಪ್ಪ ಮನೋ ವಡ್ಡರ ಅವರನ್ನು ಕೂಡಲೇ ಈ ಸ್ಥಳದಿಂದ ವರ್ಗಾವಣೆ ಮಾಡಬೇಕು ಎಂದು ಪೀರನವಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಾಕೇಶ್ ತಳವಾರ್ ನೇತೃತ್ವದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್ ಅವರಿಗೆ ಮನವಿ ನೀಡಿದರು.


