ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಬೆಳಗ್ಗೆ 7 ಗಂಟೆಯಿಂದ 7.30ರೊಳಗೆ ಭೂಕಂಪನದ ಅನುಭವವಾಗಿದ್ದು, ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.
ಬೆಂಗಳೂರಿನ ಉತ್ತರ, ಈಶಾನ್ಯ ಭಾಗದ 70 ಕಿ.ಮೀ. ದೂರದಲ್ಲಿ 11 ಕಿ.ಮೀ. ಆಳದಲ್ಲಿ ಭೂಕಂಪನ ಉಂಟಾಗಿದೆ’ ಎಂದು ಎನ್‌ಎಸ್‌ಸಿ ಟ್ವೀಟ್ ಮಾಡಿದೆ.
ಇದಾಗಿ ಐದು ನಿಮಿಷದಲ್ಲಿಯೇ ಮತ್ತೊಮ್ಮೆ ಭೂಕಂಪನ ಉಂಟಾಗಿದ್ದು, ಈ ಬಾರಿ ತೀವ್ರತೆ ಕೊಂಚ ಹೆಚ್ಚಿತ್ತು. ಬೆಂಗಳೂರು ಉತ್ತರ- ಈಶಾನ್ಯ ಭಾಗದ 66 ಕಿ.ಮೀ. ದೂರದಲ್ಲಿ 23 ಕಿ.ಮೀ. ಆಳದಲ್ಲಿ ಬೆಳಿಗ್ಗೆ 7.14ರ ಸುಮಾರಿಗೆ 3.3 ತೀವ್ರತೆಯಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.