ಅವೈಜ್ಞಾನಿಕ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯಿಂದ ಮಳೆನೀರು ಮನೆಗಳಿಗೆ ನುಗ್ಗಿದ ಘಟನೆ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೈರೇನಹಳ್ಳಿ ಗ್ರಾಮದ ಮನೆ, ಅಂಗಡಿ, ಮೆಡಿಕಲ್ಸ್ ಗಳಿಗೆ ಕೂಡ ಮಳೆ ನೀರು ನುಗ್ಗಿದೆ.
ಗುತ್ತಿಗೆದಾರರು ಚರಂಡಿಯನ್ನು ನಿರ್ಮಿಸದೇ, ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೈರೇನಹಳ್ಳಿಯ ರೈತಾಪಿ ವರ್ಗ ಮತ್ತು ಅಂಗಡಿ ಮಾಲೀಕರಿಗೆ ಲಕ್ಷಾಂತರ ರೂ ನಷ್ಟವಾಗಿದೆ ಎನ್ನಲಾಗಿದೆ.
ರಾಜ್ಯ ಹೆದ್ದಾರಿ ಗುತ್ತಿಗೆದಾರರು ಬೈರೇನಹಳ್ಳಿ ಬಸ್ ನಿಲ್ದಾಣದಲ್ಲಿ ನೂತನವಾಗಿ ಕಟ್ಟೆ ನಿರ್ಮಿಸಿದ್ದಾರೆ. ಖಾಸಗಿ ವ್ಯವಸ್ಥಾಪಕ ಕೊರಟಗೆರೆ ಕ್ಷೇತ್ರಕ್ಕೂ ರಾಜ್ಯ ಹೆದ್ದಾರಿಗೂ ಸಂಬಂಧವೇ ಇಲ್ಲವೆಂಬಂತೆ ವರ್ತಿಸಿದ್ದಾರೆ. ಸರಕಾರಿ ಅಧಿಕಾರಿಗಳು ಸ್ಥಳಕ್ಕೆ ಬರೋದಿಲ್ಲ. ಕಾಮಗಾರಿಯು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಲಾಗಿದೆ.
ಸ್ಥಳೀಯರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಬಳಿ ರಾಜ್ಯಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸುವಂತೆ ಆಗ್ರಹಿಸಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ಸಮಸ್ಯೆಯನ್ನ ಬಗೆಹರಿಸಿ ಸೂಕ್ತ ಪರಿಹಾರ ನೀಡಲು ಮುಂದಾಗುತ್ತಾರ ಎಂದು ಕಾದು ನೋಡಬೇಕಿದೆ.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296