ಚಿಕ್ಕಬಳ್ಳಾಪುರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದ ಬೆನ್ನಲ್ಲೇ ಇದೀಗ ರೈತರಿಗೂ ಶಾಕ್ ಎದುರಾಗಿದೆ. ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್) ಆಡಳಿತ ಮಂಡಳಿಯು ಶುಕ್ರವಾರದಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂಪಾಯಿ ಕಡಿತಗೊಳಿಸಿ ಆದೇಶಿಸಿದ್ದು, ಪ್ರತಿ ಲೀಟರ್ ಗೆ ಇನ್ನು ಮುಂದೆ 33.4 ರೂ. ಬದಲಿಗೆ 31.4 ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಈಗಷ್ಟೇ ಮುಂಗಾರು ಆರಂಭವಾಗಿ ರೈತರು ನಿಟ್ಟುಸಿರು ಬಿಡುತ್ತಿದ್ದ ವೇಳೆ ಕೋಚಿಮುಲ್ ಆಡಳಿತ ಮಂಡಳಿ ದಿಢೀರ್ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ.
ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್)ಗೆ ಸಂಗ್ರಹವಾಗುತ್ತಿರುವ ಹಾಲಿನ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಂದರೆ ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್ ಗೆ 9.65 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಕ್ಕೂಟದಿಂದ ಸಂಘಗಳಿಗೆ ನೀಡುವ ದರವನ್ನು ಪರಿಷ್ಕರಿಸಿದೆ. ಅದರಂತೆ, ಸಂಘಗಳು ರೈತರಿಗೆ ನೀಡುವ ದರವನ್ನು ಕಡಿತಗೊಳಿಸಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


