ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿದ್ದು, ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿ ಪ್ರಕಟಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯ 10 ಗ್ರಾಪಂ ಸದಸ್ಯರ ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದ್ದು, ನ.26ರಂದು ಮತ ಎಣಿಕೆ ಮಾಡಿ, ಫಲಿತಾಂಶ ಘೋಷಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ರಾಜೀನಾಮೆ, ಸದಸ್ಯರ ನಿಧನ ಸೇರಿ ನಾನಾ ಕಾರಣಗಳಿಂದ ವಿವಿಧ ಗ್ರಾಪಂಗಳಲ್ಲಿ ಹಲವು ತಿಂಗಳಿಂದಲೂ ಸದಸ್ಯತ್ವ ಸ್ಥಾನ ಖಾಲಿ ಇದ್ದು, ಈಗ ಅಯ್ಕೆಗೆ ಚುನಾವಣೆ ಘೋಷಿಸಲಾಗಿದೆ. ಇದರಿಂದ ಆಯಾ ಗ್ರಾಮೀಣ ಭಾಗದ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಮುಖಂಡರು ರಾಜಕೀಯ ಪಕ್ಷಗಳ ಪರೋಕ್ಷ ಬೆಂಬಲದೊಂದಿಗೆ ರಾಜಕೀಯ ಚಟುವಟಿಕೆಗಳನ್ನು ಪ್ರಾರಂಭಿಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q