ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬೈರಾಗನಹಳ್ಳಿ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ದಂಡಿನಶಿವರ ಮೂಲದ ನಾಗರಾಜ್ (45) ಎಂದು ಗುರುತಿಸಲಾಗಿದೆ. ನಾಗರಾಜ್ ಅವರು ತಮ್ಮ ಪತ್ನಿಯೊಂದಿಗೆ ಕುರುಬರಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಬೈರಾಗನಹಳ್ಳಿ ತಲುಪಿದಾಗ ನಿಯಂತ್ರಣ ತಪ್ಪಿ ಬೈಕ್ ರಸ್ತೆಗೆ ಬಿದ್ದಿದೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ರೋಡ್ ರೋಲರ್ ನಾಗರಾಜ್ ಅವರ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅದೃಷ್ಟವಶಾತ್ ನಾಗರಾಜ್ ಅವರ ಪತ್ನಿ ರಸ್ತೆಯ ಪಕ್ಕಕ್ಕೆ ಬಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಯಾವುದೇ ಮುನ್ನೆಚ್ಚರಿಕೆ ಫಲಕಗಳನ್ನು ಹಾಕಿಲ್ಲ ಮತ್ತು ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿರುವ ಸಾರ್ವಜನಿಕರು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


