ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಂದನಕೆರೆ ಗ್ರಾಮದಲ್ಲಿರುವ ಗಿರಿಸಿದ್ದೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಿಸಲಾಯಿತು.
ತಾಲ್ಲೂಕಿನಲ್ಲಿ ಬುಧವಾರ ನಡೆದ ಕಾರ್ತಿಕ ಮಾಸದ ಪೂಜೆ ಅಂಗವಾಗಿ ಪಂಜುರ್ಲಿಗೆ ಪೂಜೆ ಸಲ್ಲಿಸಲಾಯಿತು. ಕೌಶಲ್ಯ ಅಭಿವೃದ್ಧಿ ನಿಗಮದ ಜಿಲ್ಲಾ ಮಾಜಿ ಅಧ್ಯಕ್ಷ ಮುರುಳಿಧರ ಹಾಲಪ್ಪ ಹಾಗೂ ಗಿರಿಸಿದ್ದೇಶ್ವರ ಮಠದ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು.
ರಾಜಕೀಯ ಬೆಳವಣಿಗೆ ಕುರಿತು ಕಾಂಗ್ರೆಸ್ ಮುಖಂಡರೊಬ್ಬರು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯುವ ಕುರಿತು ದೈವದಲ್ಲಿ ಪ್ರಶ್ನಿಸಿದಾಗ, ಇಲ್ಲಿಯವರೆಗೂ ಅವರು ಮಾಡಿದ ಪ್ರಯತ್ನವು ಕುಂಠಿತವಾಗಿದ್ದರೂ, ಇನ್ನು ಮುಂದೆ ಅವರು ಕೈಗೊಳ್ಳುವ ಪ್ರಯತ್ನಗಳಿಗೆ ನಾನು ಖಂಡಿತವಾಗಿ ಫಲಿತಾಂಶ ನೀಡುತ್ತೇನೆ ಎಂದು ದೈವ ಅಭಯ ನೀಡಿತು.
ಮುರುಳಿಧರ ಹಾಲಪ್ಪ, ದೈವದ ಕೃಪೆಯಿಂದ ಯುವಕರು ದುಶ್ಚಟಗಳನ್ನು ತ್ಯಜಿಸಿ, ಮಾನವ ತತ್ವದ ಮೌಲ್ಯಗಳನ್ನು ಮತ್ತು ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಿರಣ್ ಕುಮಾರ್, ಕವಿತ ಕಿರಣ್ ಕುಮಾರ್, ಕೃಷ್ಣಗೌಡ, ಇತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


