ತುಮಕೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಗೆ ಸೇರಿದ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಹಶೀಲ್ದಾರ್ ಗೀತಾ, ಇಂದು ಬೆಳಗ್ಗೆ 20 ಸಾವಿರ ಹಣ ಲಂಚ ಪಡೆದಿದ್ದರು. ಬಳಿಕ ಸಂಜೆ 30 ಸಾವಿರ ರೂಪಾಯಿ ಹಣ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಹಶೀಲ್ದಾರ್ ತನ್ನ ಮನೆಗೆ ಕರೆಸಿಕೊಂಡು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ ತಹಶೀಲ್ದಾರ್ ಲಾಕ್ ಆಗಿದ್ದಾರೆ.
ಸದ್ಯ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಅವರನ್ನ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು, ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296