ತಿಪಟೂರು: ತಾಲೂಕಿನ ಮೀಸೆತಿಮ್ಮನಹಳ್ಳಿ ಬಳಿ ಇರುವ ಮಾನ್ಯಶ್ರೀ ಕೋಕನೆಟ್ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಎರಡು ವರ್ಷದ ಹೆಣ್ಣು ಮಗು ಕಾರ್ಖಾನೆಯ ಸಮೀಪದ ಗುಂಡಿಗೆ ಬಿದ್ದು ಮೃತಪಟ್ಟಿದೆ.
ಬಿಹಾರ ಮೂಲದ ತಂದೆ ಹರೀಂದ್ರ ಕುಮಾರ್ ಮತ್ತು ತಾಯಿ ರೀನಾದೇವಿ ದಂಪತಿ ಪುತ್ರಿ ಕುಸುಮಕುಮಾರಿ (2) ಸಾವನ್ನಪ್ಪಿರುವ ದುರ್ದೈವಿ.
ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಟವಾಡುತ್ತಿದ್ದ ಮಗು ಕಾಣದೇ ಇದ್ದಾಗ ಪೋಷಕರು ಹುಡುಕಾಟ ನಡೆಸಿದಾಗ ಗುಂಡಿ ಒಳಗೆ ಬಿದ್ದಿರುವುದನ್ನು ಗಮನಿಸಿ ಮಗುವನ್ನು ಮೇಲೆ ಎತ್ತಲಾಗಿದೆ.
ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx