ಅಂಗನವಾಡಿ ಕೇಂದ್ರದ ಸಿಬ್ಬಂದಿ ಎಡವಟ್ಟಿನಿಂದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯ ಉಣಕಲ್ ನ ನಿವಾಸಿ ಜಟ್ಟೆಪ್ಪರ ಮೊಮ್ಮಗ ಧ್ರುವ(2 ವರ್ಷ) ಮೃತ ಮಗು. ಒಂದೇ ದಿನ 5 ಲಸಿಕೆ ಹಾಕಿದ್ದ ಪರಿಣಾಮ ಓವರ್ ಡೋಸ್ ನಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ.
ಬುಧವಾರ ಹುಬ್ಬಳ್ಳಿಯ ಸಾಯಿನಗರದ ಅಂಗನವಾಡಿ ಕೇಂದ್ರದ ಸಿಬ್ಬಂದಿ ಲಸಿಕೆ ಹಾಕಿದ ಬಳಿಕ ಮಗುವಿಗೆ ತೀವ್ರ ಜ್ವರ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸುತ್ತಿದ್ದಂತೆಯೇ ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.


