ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಆಕೆಯನ್ನು ಬಾಲ್ಯ ವಿವಾಹ ಮಾಡಿಕೊಂಡು ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಸೋದರ ಮಾವನಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ (POCSO) 20 ವರ್ಷಗಳ ಶಿಕ್ಷೆ ಮತ್ತು 90 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮಾರುತಿ(25) ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈ ಪ್ರಕರಣ ಸಂಬಂಧ ಮಧುಗಿರಿ ಪೊಲೀಸ್ ಠಾಣಾ ತನಿಖಾಧಿಕಾರಿ ಸರ್’ದಾರ್ ಎಂ.ಎಸ್. ಅವರು ಘನ ನ್ಯಾಯಾಲಯಕ್ಕೆ ದೋಷರೋಪಣಾ ಪತ್ರವನ್ನು ಸಲ್ಲಿಸಿದರು. ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರು ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 90 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದರು.
ದಂಡದ ಮೊತ್ತದಲ್ಲಿ ನೊಂದ ಬಾಲಕಿಗೆ 85 ಸಾವಿರ ರೂಪಾಯಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q