nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ
    ಕೊರಟಗೆರೆ January 3, 2025

    ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ

    By adminJanuary 3, 2025No Comments2 Mins Read
    koratagere

    Provided by
    Provided by

    ಕೊರಟಗೆರೆ: ಮಿನಿ ಲಾಲ್‌ ಬಾಗ್‌ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು  ಕುರಿಗಳಂತೆ ಟಾಟಾ ಎಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದು, ಈ ವೇಳೆ ವಾಹನ ಪಲ್ಟಿಯಾದ ಪರಿಣಾಮ  15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ.

    ಚಿಂಪುಗಾನಹಳ್ಳಿ ಸರಕಾರಿ ಪ್ರಾಥಮಿಕ ಪಾಠಶಾಲೆಯಿಂದ ದೊಡ್ಡಸಾಗ್ಗೆರೆ ಬಳಿಯ ಮಿನಿ ಲಾಲ್‌ ಬಾಗ್ ವೀಕ್ಷಣೆಗೆ  ಶಾಲಾ ಆಡಳಿತ ಮಕ್ಕಳನ್ನು ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ.  ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ವಾಹನ ಮಗುಚಿ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಕ್ಕಳು ರಸ್ತೆಗೆಸೆಯಲ್ಪಟ್ಟಿದ್ದು, ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿಗಳು ನರಳಾಡಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕೋಳಾಲ ಪಿಎಸೈ ಯೋಗೀಶ್ ಮಕ್ಕಳನ್ನು ತಾವೇ ಎತ್ತಿ ತಮ್ಮ ಕಾರಿನಲ್ಲೇ ದೊಡ್ಡ ಸಾಗ್ಗೆರೆ ಹಾಗೂ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.


    Provided by
    Provided by

    ಈ ಘಟನೆಯಲ್ಲಿ ಶಿಕ್ಷಣ ಇಲಾಖೆ ಬಿಇಓ ಮತ್ತು ಚಿಂಪುಗಾನಹಳ್ಳಿ ಶಾಲೆಯ ಮುಖ್ಯಶಿಕ್ಷಕರ ದಿವ್ಯ ನಿರ್ಲಕ್ಷ ಕಂಡು ಬಂದಿದೆ.  ಭದ್ರತೆಯೇ ಇಲ್ಲದ ಟಾಟಾ ಎಸಿ ವಾಹನದಲ್ಲಿ ಸರಕಾರಿ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗಲು ಬಿಇಓ ಅನುಮತಿ ನೀಡಿದ್ದಾದರೂ ಏಕೆ ಎಂಬುದೇ ಪ್ರಶ್ನೆ ಕೇಳಿ ಬಂದಿದೆ.

    ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ನೆರವು ಮಾಡಿದ್ದಾರೆ.

    ಕ್ರಮಕ್ಕೆ ಒತ್ತಾಯ:

    ಶಿವಕುಮಾರ್ ಮೇಷ್ಟ್ರು ಮನೆ

    ಘಟನೆ ಸಂಬಂಧ ನಮ್ಮತುಮಕೂರು ಜೊತೆಗೆ ಮಾತನಾಡಿದ ಕಾಳಜಿ ಫೌಂಡೇಶನ್ ತುಮಕೂರು ಇದರ ಕಾನೂನು ಸಲಹೆಗಾರರಾದ  ಶಿವಕುಮಾರ್ ಮೇಷ್ಟ್ರು ಮನೆ , ಲಗೇಜ್ ಕ್ಯಾರಿಯರ್ ವಾಹನದಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬಿಸಿಕೊಂಡು ಹೋಗಿರುವ  ಈ ಘಟನೆಯನ್ನು ನೋಡಿದ್ರೆ ನಾಚಿಕೆಯಾಗಬೇಕು,  ಶಿಕ್ಷಣ ಇಲಾಖೆ ಆಯುಕ್ತರ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.  ಸರ್ಕಾರಿ ವಾಹನದಲ್ಲೇ ಇಷ್ಟೇ ಮಿತಿಯಲ್ಲಿ ಮಕ್ಕಳನ್ನು ಕರೆದೊಯ್ಯಬೇಕು ಎನ್ನುವ ನಿಯಮವಿದೆ. ಈ ಎಲ್ಲ ಆದೇಶಗಳನ್ನು ಉಲ್ಲಂಘಿಸಿ, ಮಕ್ಕಳನ್ನು ಕರೆದೊಯ್ದು ಅವರ ಜೀವನದಲ್ಲಿ ಚೆಲ್ಲಾಟವಾಡಿದ್ದಾರೆ. ಇದಕ್ಕೆಲ್ಲ ನೇರ ಹೊಣೆ ಮುಖ್ಯಶಿಕ್ಷಕರು ಹಾಗೂ ಮಕ್ಕಳನ್ನು ಕರೆದೊಯ್ಯಲು ಅನುಮತಿ ನೀಡಿದ ಬಿಇಒ,  ಇವರಿಬ್ಬರ ವಿರುದ್ಧವೂ ಉಪ ನಿರ್ದೇಶಕರು ದೂರು ದಾಖಲಿಸಬೇಕು. ವಾಹನ ಮಾಲಿಕರು, ಡ್ರೈವರ್ ವಿರುದ್ಧವೂ ಕ್ರಮಕೈಗೊಳ್ಳಬೇಕು.  ಬಿಇಒ ಮತ್ತು ಮುಖ್ಯ ಶಿಕ್ಷಕರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.