ಕೊರಟಗೆರೆ: ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡುವ ಸಲುವಾಗಿ ನಮ್ಮ ಶಾಲೆಯ ಪ್ರತಿಯೊಬ್ಬ ಶಿಕ್ಷಕರು ತಮ್ಮದೇ ಆದ ಶ್ರಮ ಹಾಕುತ್ತಿದ್ದಾರೆ ಎಂದು ಆಡಳಿತ ಮಂಡಳಿಯ ಇಸ್ಮಾಯಿಲ್ ಜಬೀವೂಲ್ಲಾ ತಿಳಿಸಿದರು.
ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ ಗ್ರಾಮದ ಕಾರ್ಡಿನಲ್ ಸ್ಕೂಲ್‌ನಲ್ಲಿ ಏರ್ಪಡಿಸಲಾಗಿದ್ದ ಎಲ್ ಕೆಜಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ರಾಮೀಣ ಭಾಗದ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಎಷ್ಟೋ ಮಕ್ಕಳು ಇಂದು ದೊಡ್ಡ ದೊಡ್ಡ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಶಾಲೆಯಲ್ಲೂ ಸಹ ಗುಣ ಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಕ್ಷರಾಭ್ಯಾಸ ಎನ್ನವುದು ಮಕ್ಕಳಿಗೆ ಶಾಲೆಯಲ್ಲಿ ಮೊದಲ “ಅ” ಎನ್ನವ ಪದದಿಂದ ಪ್ರಾರಂಭ ಮಾಡುವುದು ಮುಂದಿನ ಕಲಿಕೆಗೆ ಮುನ್ನುಡಿ ಬರೆಯಲಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕಿ ಎಚ್.ವೈ.ಮಂಜಮ್ಮ ಮಾತನಾಡಿ, ನಮ್ಮ ಹಿಂದೂ ಸಂಸ್ಕೃತಿ ಅಥವಾ ಶಾಸ್ತ್ರದ ಪ್ರಕಾರ ಮಕ್ಕಳಿಗೆ ಅನೇಕ ಶಾಸ್ತ್ರಗಳಿವೆ ನಾಮಕರಣ, ಅನ್ನಶಾಸ್ತ್ರ, ಅಕ್ಷರಾಭ್ಯಾಸ, ಎಂಬುದು ಕೂಡ ಪದ್ದತಿಯಲ್ಲಿದೆ. ನಮ್ಮ ಶಾಲೆಗೆ ದಾಖಲಾದ ಎಲ್ ಕೆಜಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡುವ ಮೂಲಕ ಅವರ ಮುಂದಿನ ವ್ಯಾಸಂಗ ಸೂಸೂತ್ರವಾಗಿ ಇರಲಿ ಎಂದು ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಪೋಷಕರು ಭಾಗವಹಿಸಿ ತಮ್ಮ ಮಕ್ಕಳಿಗೆ ಅಕ್ಷರಾಬ್ಯಾಸ ಮಾಡಿಸಿ ಖುಷಿ ಪಟ್ಟಿದ್ದಾರೆ ಎಂದು ತಿಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC