nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    • ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    ಕುಣಿಗಲ್ July 4, 2026

    ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ

    By adminJuly 4, 2026No Comments2 Mins Read
    pathrika dina.jpg

    ಕುಣಿಗಲ್: ಗುರು ವ್ಯಕ್ತಿಯನ್ನು ರೂಪಿಸಿದರೆ, ಪತ್ರಿಕಾ ಮಾಧ್ಯಮ ಇಡೀ ಸಮಾಜವನ್ನು ರೂಪಿಸುತ್ತದೆ, ಜನ ಸಾಮಾನ್ಯರ ಸಮಸ್ಯೆ ಅರಿತು ಸಮಾಜವನ್ನು ತಿದ್ದುವಂತಹ ಕೆಲಸ ಪತ್ರಿಕೆಗಳು ಮಾಡುತ್ತಿವೆ ಹೀಗಾಗಿ ಪತ್ರಿಕಾ ಮೌಲ್ಯಗಳು ಇಂದಿನ ಮಕ್ಕಳಿಗೆ ಮಹತ್ವದಾಗಿದೆ, ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾಮಣಿ ತಿಳಿಸಿದರು.

    ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪತ್ರಿಕಾ ದಿನಾಚರಣೆ ಕೇವಲ ದಿನಾಚರಣೆಯಲ್ಲ ಸತ್ಯ, ಸ್ವಾತಂತ್ರ್ಯ ಸಾಮಾಜಿಕ, ಒಳ್ಳೆಯ ಸಂಕಲ್ಪದ ದಿನಾಚರಣೆಯಾಗಿದೆ, ಪತ್ರಿಕೆ ಸಮಾಜವನ್ನು ರೂಪಿಸುವಂತಹ ಗುರುತರವಾದ ಜವಾಬ್ದಾರಿ ಹೊಂದಿದೆ, ಸಮಾಜದಲ್ಲಿ ಶಿಕ್ಷಣ ಹಾಗೂ ಪತ್ರಿಕಾ ರಂಗ ಎರಡು ಕಣ್ಣುಗಳು ಇದ್ದ ಹಾಗೆ, ಸಮಾಜವನ್ನು ಬದಲಾಯಿಸುವಂತಹ ದೊಡ್ಡ ಶಕ್ತಿ ಲೇಖನಿ ಹೊಂದಿದೆ ಎಂದು ಹೇಳಿದರು.

    ವೃತ್ತ ನಿರೀಕ್ಷಕ ಮಾದ್ಯಾ ನಾಯಕ್ ಮಾತನಾಡಿ, ರಾಷ್ಟ್ರದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ಮಾಧ್ಯಮವನ್ನು ನಾಲ್ಕನೇ ಅಂಗವೆಂದು ಕರೆಯಲ್ಪಡುತ್ತಿದೆ, ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ಸಲ್ಲಿಸಿದ ಸೇವೆ ಅನನ್ಯವಾಗಿದೆ, ಸಾಮಾಜಿಕ ಜಾಲತಾಣದಿಂದ ಉದ್ಭವಿಸುವ ಹಲವು ಸವಾಲುಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿವೆ, ತಂತ್ರಜ್ಞಾನವು ಹೊಸ ಸವಾಲುಗಳನ್ನು ಸೃಷ್ಟಿಸುತ್ತಿದ್ದು, ಅವುಗಳನ್ನು ಜವಾಬ್ದಾರಿಯುತ ಕೆಲಸವನ್ನು ಪತ್ರಿಕೋದ್ಯಮ ಮಾಡುತ್ತಿದೆ ಎಂದರು.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ಮಾತನಾಡಿ, ಈ ಹಿಂದೆ ಜನರು ಪತ್ರಿಕೆ ಓದುವ ಮೂಲಕ ತಮ್ಮ ದಿನಚರಿಯನ್ನು ಪ್ರಾರಂಭಿಸುತ್ತಿದ್ದರು ಆದರೆ ಇತ್ತೀಚೆಗೆ ಯುವ ಜನಾಂಗ ಮೊಬೈಲ್ ವ್ಯಾಮೋಹಕ್ಕೆ ಒಳಗಾಗಿ ತಮ್ಮ ಜ್ಞಾನದ ಸಂಪತ್ತನ್ನು ಕಳೆದುಕೊಳ್ಳುತ್ತಿರುವುದರಿಂದ ಪತ್ರಿಕೆ ಓದುಗರ ಸಂಖ್ಯೆ ಇಳಿಮುಖವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ತಾಲೂಕು ಪತ್ರಿಕಾ ಸಂಘದ ಅಧ್ಯಕ್ಷ ಬಿಚ್ಚನಹಳ್ಳಿ ಶ್ರೀನಿವಾಸ್ ಮಾತನಾಡಿ, ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಪತ್ರಿಕಾ ರಂಗವನ್ನು ದುರ್ಬಳಕೆ ಮಾಡಿಕೊಂಡು ಅದನ್ನು ಕಲುಷಿತಗೊಳಿಸುವಂತಹ ಕೆಲಸ ಮಾಡುತ್ತಿದ್ದಾರೆ, ಅಂತಹ ನಕಲಿ ಪತ್ರಕರ್ತರಿಂದ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಕೆಟ್ಟ ಹೆಸರು ಬರುತ್ತಿದೆ ಹಾಗಾಗಿ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ನಕಲಿ ಪತ್ರಕರ್ತರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಇದೇ ವೇಳೆ ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ರಘುರಾಮ್, ನಿರ್ದೇಶಕರಾದ ಬೆಳಗರೆ ಜಯಣ್ಣ, ಹೆಚ್.ಎಂ.ಅಶೋಕ್, ಪುರುಷೋತ್ತಮ್, ಶ್ರೀವತ್ಸ, ರಾಜ್ಯ ಸಮಿತಿ ಮಾಜಿ ಸದಸ್ಯ ಸಿದ್ದಲಿಂಗಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಎಂ.ಪಾರೀಷ್ಉಲ್ಲಾ, ಉಪಾಧ್ಯಕ್ಷ ಎಂ.ಡಿ.ಮೋಹನ್, ಕಾರ್ಯದರ್ಶಿ ಟಿ.ಹೆಚ್.ಆನಂದ್ಸಿಂಗ್ ಮತ್ತಿತರರು ಇದ್ದರು.

    ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಯಲ್ಲಿ ಪತ್ರಿಕೆ ಮಾಧ್ಯಮಗಳ ಕೊಡುಗೆ ಮರೆಯುವಂತದ್ದಲ್ಲ, ಸಮಾಜದಲ್ಲಿ ಘಟಿಸುವಂತಹ ಘಟನೆಗಳನ್ನು ಪತ್ರಕರ್ತರು ಸವಾಲಾಗಿ ಸ್ವೀಕರಿಸಿ ಎದೆಗುಂದದೇ ನಿಷ್ಪಕ್ಷಪಾತವಾಗಿ ಬರೆಯುವ ಮೂಲಕ ಸಮಾಜದ ಕಣ್ಣು ತೆರೆಸುತ್ತಿವೆ ಜೊತೆಗೆ ಜನರಲ್ಲಿ ಪ್ರಜ್ಞೆ ಮೂಡಿಸುವಲ್ಲಿ ಪತ್ರಿಕೆ ರಂಗ ಉತ್ತಮ ಕೆಲಸ ಮಾಡುತ್ತಿದೆ ಹೀಗಾಗಿ ದೂರ ದರ್ಶನ ಹಾಗೂ ಮೊಬೈಲ್ ಗೀಳು ಬಿಟ್ಟು ಪತ್ರಿಕೆಗಳನ್ನು ಓದುವ ಮೂಲಕ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ.

    | ಡಾ.ಕಪನಿಪಾಳ್ಯ ರಮೇಶ್, ಕಸಾಪ ಅಧ್ಯಕ್ಷ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಆ.23: ಕುಣಿಗಲ್‌ ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ

    August 20, 2026

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ: ಹೋರಾಟಕ್ಕೆ ಸಂದ ಜಯ– ಶಾಸಕ ಡಾ.ಎಚ್.ಡಿ.ರಂಗನಾಥ್

    July 26, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ…

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.