ತುಮಕೂರು: ಪ್ರಸಕ್ತ ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಮುನ್ನವೇ ಕೆಲವು ಖಾಸಗಿ ಶಾಲೆಗಳು ಮಕ್ಕಳನ್ನು ದಾಖಲು ಮಾಡುವಂತೆ ಪೋಷಕರನ್ನು ಒತ್ತಾಯ ಮಾಡುತ್ತಿರುವ ಬಗ್ಗೆ ಜಿಲ್ಲಾ ಖಾಸಗಿ ಶಾಲಾ ಮಕ್ಕಳ ಪೋಷಕರ ಸಂಘ ಆರೋಪಿಸಿದೆ.
ಮಕ್ಕಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆಯಾಗದ ಕಾರಣ 2025–26ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೂ ಮುನ್ನ ಮಕ್ಕಳ ದಾಖಲಾತಿ ಮಾಡಿಕೊಂಡ ಬಗ್ಗೆ ಪೋಷಕರಿಂದ/ಸಾರ್ವಜನಿಕರಿಂದಾಗಲಿ ದೂರುಗಳು ಬಂದಲ್ಲಿ ಸಂಬಂಧಿಸಿದ ಶಾಲೆ/ ಶಾಲಾ ಆಡಳಿತ ಮಂಡಳಿಯನ್ನು ನೇರ ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ತುಮಕೂರು ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4