nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
    ತುಮಕೂರು November 22, 2025

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    By adminNovember 22, 2025No Comments2 Mins Read
    nahida jam jam
    ನಾಹಿದಾ ಜಮ್ ಜಮ್, ಉಪವಿಭಾಗಾಧಿಕಾರಿಗಳು ಹಾಗೂ ನ್ಯಾಯ ಮಂಡಳಿಯ ಅಧ್ಯಕ್ಷರು

    ವರದಿ: ಮಂಜುಸ್ವಾಮಿ ಎಂ.ಎನ್.

    ನಮ್ಮತುಮಕೂರು(Namma Tumakuru): ತಂದೆ—ತಾಯಿ ಆಸ್ತಿ ದಾನ ಮಾಡಿದ ನಂತರ, ಅವರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ ತಂದೆ ತಾಯಿ ತಕ್ಕ ಪಾಠ ಕಲಿಸಿದ್ದು, ತಾವು ದಾನವಾಗಿ ನೀಡಿದ ಆಸ್ತಿಯನ್ನು ವಾಪಾಸ್ ಪಡೆದುಕೊಳ್ಳುವ ಮೂಲಕ, ಮಕ್ಕಳಿಗೆ ಬುದ್ಧಿ ಕಳಿಸಿದ್ದಾರೆ.

    ವಯೋವೃದ್ಧೆಯಿಂದ ದೂರು:

    ಶಿರಾ ತಾಲ್ಲೂಕಿನ ಸಪ್ತಗಿರಿ ಬಡಾವಣೆಯ ರಂಗಮ್ಮ ಅವರು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ(Senior Citizens Helpline)ವನ್ನು ಸಂಪರ್ಕಿಸಿದ್ದರು. ಈ ಮೂಲಕ ದೂರು ನೀಡಿದ ಅವರು,  ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಮಠ ಗ್ರಾಮದ ಸ.ನಂ. 37ರ 3-26 ಎ/ಗುಂಟೆ ಜಮೀನನ್ನು ದಿನಾಂಕ 23-12-2021 ರಂದು ತಮ್ಮ ಮೂವರು ಪುತ್ರರಾದ ಗುಜ್ಜಾರಪ್ಪ, ಶಿವಣ್ಣ ಮತ್ತು ಹನುಮಂತಯ್ಯ ಅವರಿಗೆ ದಾನಪತ್ರದ ಮೂಲಕ ನೀಡಿದ್ದಾಗಿ ತಿಳಿಸಿದ್ದಾರೆ.

    ಆದರೆ ದಾನಪತ್ರ ಪಡೆದ ನಂತರ ಮಕ್ಕಳು ತಾಯಿಯ ಹಾಗೂ ತಂದೆಯ ಆರೈಕೆ, ಆಹಾರ, ಚಿಕಿತ್ಸಾ ನೆರವು, ಮೂಲಭೂತ ಅಗತ್ಯಗಳನ್ನು ನಿರ್ಲಕ್ಷಿಸಿದ್ದು, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಆದ್ದರಿಂದ ದಾನಪತ್ರವನ್ನು ರದ್ದುಪಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.

    ಮಕ್ಕಳ ವಾದ ಏನು?

    ತಂದೆ ತಾಯಿಯ ದೂರಿನ ಹಿನ್ನೆಲೆ ತುಮಕೂರು ಉಪವಿಭಾಗಾಧಿಕಾರಿಗಳ ಮತ್ತು ನಿರ್ವಹಣಾ ನ್ಯಾಯ ಮಂಡಳಿಯ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿದ ಮೂವರು ಪುತ್ರರು ಜಂಟಿಯಾಗಿ ಲಿಖಿತ ಹೇಳಿಕೆ ಸಲ್ಲಿಸಿದ್ದು,  ತಾಯಿ–ತಂದೆಗೆ ಆರೈಕೆ ಮಾಡುತ್ತಿದ್ದೇವೆ,  ದಾನಪತ್ರ ತಾಯಿಯ ಸ್ವಇಚ್ಛೆಯಿಂದ ಮಾಡಲಾಗಿದೆ,  ಭೂಮಿಯಲ್ಲಿ ಅಭಿವೃದ್ಧಿ ಮಾಡಿರುವುದರಿಂದ ಹಿಂದಿರುಗಿಸಲು ಸಮ್ಮತಿ ಇಲ್ಲ,  ತಾಯಿ–ತಂದೆ ತಮ್ಮ ಜತೆ ವಾಸಿಸಲು ಬಂದರೆ ನೋಡಿಕೊಳ್ಳಲು ಸಿದ್ಧ ಎಂದು ಹೇಳಿದರು.

    ದಾಖಲೆ ಸಲ್ಲಿಸದ ಮಕ್ಕಳು:

    ನಾವು ತಂದೆ ತಾಯಿಯ ಆರೈಕೆ ಮಾಡುತ್ತಿದ್ದೇವೆ ಎಂದು ಹೇಳಿರುವ ಪುತ್ರರು ಅದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತಮ್ಮ ವಾದಕ್ಕೆ ಯಾವುದೇ ಬೆಂಬಲವಾದ ಸಾಕ್ಷಿಗಳು ಅವರಿಂದ ದೊರೆಯಲಿಲ್ಲ.

    ದಾನಪತ್ರ ರದ್ದು:

    ವಯೋವೃದ್ಧೆಯ ದೂರನ್ನು ವಿಚಾರಣೆ ನಡೆಸಿದ ತುಮಕೂರು ಉಪವಿಭಾಗಾಧಿಕಾರಿಗಳ ಮತ್ತು ನಿರ್ವಹಣಾ ನ್ಯಾಯ ಮಂಡಳಿಯ ನ್ಯಾಯಾಲಯವು ಹಿರಿಯ ನಾಗರಿಕರಾದ ರಂಗಮ್ಮ ಅವರು ತಮ್ಮ ಮೂವರು ಪುತ್ರರಿಗೆ ನೀಡಿದ್ದ ದಾನಪತ್ರವನ್ನು ರದ್ದುಪಡಿಸುವ ಮಹತ್ವದ ಆದೇಶವನ್ನು ಹೊರಡಿಸಿದೆ. ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆ–2007ರ ಕಲಂ 23(1) ರಡಿ ಈ ನಿರ್ಧಾರ ಕೈಗೊಳ್ಳಲಾಗಿದೆ.

    ವೃದ್ಧರ ನಿರ್ಲಕ್ಷಿಸುವವರಿಗೆ ತಕ್ಕಪಾಠ:

    ತಂದೆ ತಾಯಿಯಿಂದ ಆಸ್ತಿಯನ್ನು ವರ್ಗಾಯಿಸಿಕೊಂಡ ನಂತರ ಅವರಿಗೆ ಮೂರು ಹೊತ್ತು ಆಹಾರ, ಮೂಲಭೂತ ಸೌಕರ್ಯಗಳನ್ನೂ ಒದಗಿಸದೇ ನಿರ್ಲಕ್ಷಿಸುವ, ಕಿರುಕುಳ ನೀಡುವ ಮಕ್ಕಳಿಗೆ ನ್ಯಾಯಾಲಯದ ಈ ಆದೇಶ ತಕ್ಕ ಪಾಠ ಕಲಿಸಿದಂತಾಗಿದೆ.

    ನ್ಯಾಯಾಲಯದ ಮಹತ್ವದ ಆದೇಶ:

    ದಾನಪತ್ರದಲ್ಲಿ “ಮಕ್ಕಳು ನನ್ನ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವುದರಿಂದ ನಿರಂತರ ಆರೈಕೆಯ ನಂಬಿಕೆಯಿಂದ ದಾನ” ಮಾಡಲಾಗಿದೆ ಎಂದು ಸ್ಪಷ್ಟವಾದ ಷರತ್ತು ಉಲ್ಲೇಖಿತವಾಗಿದೆ.  ಹಿರಿಯರು ಹೇಳಿದಂತೆ, ಮಕ್ಕಳು ಆ ಷರತ್ತನ್ನು ಪಾಲಿಸದಿರುವುದು ದೃಢಪಟ್ಟ ಕಾರಣ, ಕಲಂ 23(1)ರ ಪ್ರಕಾರ ದಾನಪತ್ರ ರದ್ದುಪಡಿಸಲು ಅಧಿಕಾರವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

    ನ್ಯಾಯಾಲಯದ ಆದೇಶ:

    ಉಪವಿಭಾಗಾಧಿಕಾರಿಗಳು ಹಾಗೂ ನ್ಯಾಯ ಮಂಡಳಿಯ ಅಧ್ಯಕ್ಷರಾದ ನಾಹಿದಾ ಜಮ್ ಜಮ್, ಕೆ.ಎ.ಎಸ್. ಅವರು ತಮ್ಮ ಆದೇಶದಲ್ಲಿ,  ಉಪನೋಂದಣಾಧಿಕಾರಿಗಳು, ಗುಬ್ಬಿ ಕಛೇರಿಯಲ್ಲಿ ದಾಖಲಾದ  ಜಿಬಿಬಿ—1–06849–2021–22, ದಿನಾಂಕ 23—12–2021ರ ದಾನಪತ್ರವನ್ನು  “ನಿರರ್ಥಕ” ಎಂದು ಘೋಷಿಸಿ ರದ್ದುಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ…

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.