ತುಮಕೂರು: ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮಕ್ಕಳಿಗಾಗಿ ಏಪ್ರಿಲ್ 4 ರಿಂದ ಮೇ 10ರವರೆಗೆ ಬೇಸಿಗೆ ರಂಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ 8 ರಿಂದ 14 ವರ್ಷ ವಯೋಮಾನದ ಮಕ್ಕಳು ಭಾಗವಹಿಸಬಹುದಾಗಿದೆ. ಶಿಬಿರವು ಪ್ರತಿ ದಿನ ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆಯಲಿದೆ. ತರಬೇತಿಗೆ 1,000 ರೂ. ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಭಾಗವಹಿಸುವ ಮಕ್ಕಳು ಊಟ, ಉಪಹಾರ ಮತ್ತು ಕುಡಿಯುವ ನೀರನ್ನು ಸ್ವಯಂ ವ್ಯವಸ್ಥೆ ಮಾಡಿಕೊಳ್ಳಬೇಕು. ಆಯ್ಕೆಯಾದ ಮಕ್ಕಳು ಟ್ರಸ್ಟ್ ಕಾಲ ಕಾಲಕ್ಕೆ ರೂಪಿಸುವ ನಿಯಮಗಳಿಗೆ ಬದ್ಧರಾಗಿರಬೇಕು.
ಶಿಬಿರದಲ್ಲಿ ಭಾಗವಹಿಸಲಿಚ್ಛಿಸುವ ಮಕ್ಕಳು ನಿಗದಿತ ಅರ್ಜಿ ನಮೂನೆಯನ್ನು ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಿಂದ ಪಡೆದು, ಭರ್ತಿ ಮಾಡಿದ ಆರ್ಜಿಯನ್ನು ಏಪ್ರಿಲ್ 5ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ: 08131–223336 / 0816–2275204, ಮೊ.ಸಂ.8546948858ನ್ನು ಸಂಪರ್ಕಿಸಬೇಕೆಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4