nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    • ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್
    ಜಿಲ್ಲಾ ಸುದ್ದಿ December 3, 2025

    ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್

    By adminDecember 3, 2025No Comments2 Mins Read
    sargur

    ಸರಗೂರು:  ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅವಕಾಶ ಸಿಕ್ಕಾಗ ಪ್ರಬುದ್ಧತೆಯ ಪ್ರದರ್ಶನಕ್ಕೆ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕೆಂದು ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್  ಹೇಳಿದರು.

    ತಾಲೂಕಿನ ಕೆ.ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪದನಿಮಿತ್ತ ಕ್ಷೇತ್ರ ಸಮನ್ವಯಾಧಿಕಾರಿಗಳ ಸಹಾಯದೊಂದಿಗೆ ಕೆ.ಬೆಳತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 25–26 ನೇ ಸಾಲಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಪ್ರತಿಭೆ ಅಡಗಿರುತ್ತದೆ. ಅವನ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಭೆ ಗುರುತಿಸಿ, ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಉತ್ತೇಜನ ನೀಡಿ, ಹೊರ ಜಗತ್ತಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಶಾಲಾ ಮಟ್ಟದಲ್ಲಿ ಇಂತಹ ಪ್ರತಿಭೆಗಳನ್ನು ಗುರುತಿಸಿದರೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸುವ ಅವಕಾಶವಿದೆ. ಇದರಿಂದ ಅವರು ಜೀವನದಲ್ಲಿ ಮತ್ತಷ್ಟು ಸಂಶೋಧನೆ–ಪ್ರಯೋಗಗಳನ್ನು ಮಾಡುತ್ತಾರೆಂದು ಹೇಳಿದರು.

    ನಂತರ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಜುರವರು ವಿದ್ಯಾರ್ಥಿಗಳು ಶಿಕ್ಷಣದಷ್ಟೇ ಆರೋಗ್ಯದ ಬಗ್ಗೆ ಗಮನ ಕೊಟ್ಟು ಯೋಗಾಭ್ಯಾಸ ನಾನಾ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಆಧ್ಯಾತ್ಮಿಕ ಸಾಂಸ್ಕೃತಿಕ ಸೇವಾ ಮನೋಭಾವ ಬೆಳೆಸಿಕೊಂಡು ಉತ್ತಮ ಸಾಕ್ಷರ ಪ್ರಜೆಗಳಾಗಿ ಬೆಳೆಯಬೇಕೆಂದು ತಿಳಿಸಿದರು.

    ಮಕ್ಕಳಲ್ಲಿರುವ ಪ್ರತಿಭೆಯನ್ನು ಕಾರಂಜಿಯಂತೆ ಹೊರ ತರಲು ವರ್ಷಕ್ಕೆ ನಾಲ್ಕಾರು ಕಾರ್ಯಕ್ರಮಗಳನ್ನು ನಡೆಸಿ ಮಕ್ಕಳಲ್ಲಿರುವ ಸಾಕ್ಷರತೆ ಕ್ರಿಯಾಶೀಲಗೊಳಿಸಬೇಕು. ಕೇವಲ ಸರಕಾರದ ಆದೇಶಕ್ಕಾಗಿ ಮಾತ್ರ ಕಾರ್ಯಕ್ರಮ ರೂಪಿಸದೆ, ಮಕ್ಕಳ ಏಳಿಗೆಗಾಗಿ ಕಾರ್ಯಕ್ರಮ ಆಯೋಜಿಸಬೇಕೆಂದು ಹೇಳಿದರು.

    ಗ್ರಾಪಂ ಸದಸ್ಯ ರುದ್ರಯ್ಯ ಮಾತನಾಡಿ, ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ನಡೆಸುವುದರಿಂದ ಮಕ್ಕಳಲ್ಲಿನ ಕಲಿಕಾ ಕ್ರಿಯಾಶೀಲತೆ ಹೆಚ್ಚಾಗಿ, ಪ್ರತಿಭಾವಂತ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಗೆ ಒತ್ತು ಕೊಟ್ಟು ಉನ್ನತ ಶಿಕ್ಷಣದ ಗುರಿ ಹೊಂದುತ್ತಾರೆಂದು ಹೇಳಿದರು.

    ಕಾರ್ಯಕ್ರಮ ಮುನ್ನ ಪ್ರಮುಖ ಬೀದಿಗಳಲ್ಲಿ ಗಣ್ಯರನ್ನು ಎತ್ತಿನಗಾಡಿಯಲ್ಲಿ ಮೂಲಕ ಮೆರವಣಿಗೆ ನಡೆಯಿಸಿದರು.

    ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ಅಂಕಯ್ಯ,ಗ್ರಾಪಂ ಸದಸ್ಯರಾದ ರುದ್ರಯ್ಯ, ಚಿಕ್ಕಲಾನಾಯಕ, ರತ್ನಮ್ಮ ಸಿದ್ದನಾಯಕ, ಭರತ್, ನಾಗರಾಜು, ಯಜಮಾನರು ಸುಂದರ ಗೌಡ,  ನಾಗರಾಜು, ರಾಜೇಗೌಡ, ಜವರಯ್ಯ, ಸಿದ್ದನಾಯಕ, ದೇವರಾಜು, ಚಾಮರಾಜು, ಸಿದ್ದನಾಯಕ, ಅಂಗಡಿ ಶ್ರೀನಿವಾಸ, ಗುತ್ತಿಗೆದಾರ ಕೇಂಪರಾಜು, ತಾ.ಪಂ. ಮಾಜಿ ಅಂಕನಾಯಕ, ಕಾಮ್ಯ ಮಹದೇವನಾಯಕ, ಬಿ ಆರ್ ಸಿ ಗಿರೀಶ್ ಮೂರ್ತಿ, ಪಿಡಿಒ ಯೋಗೇಂದ್ರ,ಮುಖ್ಯ ಶಿಕ್ಷಕಿ ರಶ್ಮಿ, ಇನ್ನೂ ಮುಖಂಡರು ಸೇರಿದಂತೆ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್‌ | ಕಾರಂಜಾ ಕಾಲುವೆಗೆ ಬಿದ್ದು ತಂದೆ–ಮಗ ಸಾವು

    February 17, 2026

    ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್‌ ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಮನವಿ

    February 16, 2026

    ಶ್ರೀ ಕ್ಷೇತ್ರ ಬೇಲದ ಕುಪ್ಪೆ ಶ್ರೀ ಮಹದೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪೂಜೆ

    February 16, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ನವದೆಹಲಿ: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026’ (India AI Impact Expo 2026)…

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.