ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ವ್ಯಾಪಾರಿಗಳಿಗೆ ಆದಾಯ ತೆರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಸುಮಾರು 25ಕ್ಕೂ ಹೆಚ್ಚು ಚಿನ್ನದ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ನಡೆಸಿದ್ದಾರೆ.
ತೆರಿಗೆ ವಂಚನೆ ಮಾಡಿ ವ್ಯಾಪಾರ ಮಾಡುತ್ತಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ನಗರದಲ್ಲಿನ ವ್ಯಾಪಾರಿಗಳ ಅಂಗಡಿ ಮೇಲೆ ದಾಳಿ ಮಾಡಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಒಟ್ಟು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶದಲ್ಲಿ ನಡೆದಿರುವ ದಾಳಿಯಲ್ಲಿ ಪಾಳ್ಗೊಂಡಿದೆ. ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


