ಮಾದಕ ವಸ್ತು ಗಾಂಜಾ ಹಾಗೂ ಚಿರತೆ ಚರ್ಮ ಮಾರಾಟ ದಂಧೆಯಲ್ಲಿ ತೊಡಗಿದ್ದ ಕುಖ್ಯಾತ ರೌಡಿ ಧನ್ ರಾಜ್ ನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಭಾರತೀನಗರ ಪೊಲೀಸ್ ಠಾಣೆಯ ರೌಡಿಶೀಟರ್ ಧನ್ ರಾಜ್ (30)ನಿಂದ 10 ಲಕ್ಷ ಮೌಲ್ಯದ ಚಿರತೆ ಚರ್ಮ ಹಾಗೂ 8 ಸಾವಿರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರು ತಿಳಿಸಿದ್ದಾರೆ.
ಭಾರತೀನಗರ ಪ್ರದೇಶವೊಂದರಲ್ಲಿ ಆರೋಪಿಯು ಚಿರತೆಯ ಚರ್ಮದ ಜೊತೆಗೆ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯ ವಿರುದ್ಧ ಭಾರತೀನಗರ ಪೊಲೀಸ್ ಠಾಣೆಯಲ್ಲಿ ಅಲ್ಲದೇ ವೈಲ್ಡ್ ಲೈಫ್ ಪ್ರೊಟೆಕ್ಷನ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


