ತಿ.ನರಸೀಪುರ: ಮೈಸೂರಿನ ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಾಪತ್ತೆಯಾಗಿದ್ದ 11 ವರ್ಷದ ಬಾಲಕನ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತನನ್ನು ಜಯಂತ್ ಎಂದು ಗುರುತಿಸಲಾಗಿದ್ದು, ಆತನ ಮೃತದೇಹ ಗ್ರಾಮದ ಹೊರವಲಯದಲ್ಲಿ 2 ಕಿ.ಮೀ ದೂರದಲ್ಲಿ ಗಿಡಗಂಟಿಗಳ ನಡುವೆ ಪತ್ತೆಯಾಗಿದೆ.
ಕಳೆದ 48 ಗಂಟೆಗಳಲ್ಲಿ ಶಂಕಿತ ದಾಳಿಗೆ ಇದು ಎರಡನೇ ಬಲಿಯಾಗಿದೆ. ತಿ.ನರಸೀಪುರ ತಾಲೂಕಿನಲ್ಲಿ ನವೆಂಬರ್ ತಿಂಗಳಿನಿಂದ ಈವರೆಗೆ ಚಿರತೆ ದಾಳಿಗೆ ನಾಲ್ವರು ಸಾವನ್ನಪ್ಪಿದ್ದಾರೆ.
ಬಾಲಕ ನಾಪತ್ತೆಯಾದ ಬಗ್ಗೆ ಶನಿವಾರ ಸಂಜೆ ದೂರು ಸ್ವೀಕರಿಸಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರೂ, ರಾತ್ರಿಯೇ ಶೋಧ ಕಾರ್ಯವನ್ನು ನಿಲ್ಲಿಸಲಾಯಿತು. ಭಾನುವಾರ ಘಟನೆ ನಡೆದ ಸ್ಥಳದಿಂದ ಸುಮಾರು 2 ಕಿ.ಮೀ. ದೂರದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ತಿಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


