ಗುಬ್ಬಿ: ತೋಟದ ಮನೆಯಲ್ಲಿ ಕಟ್ಟಿ ಹಾಕಿದ್ದ ಟಗರುವೊಂದನ್ನು ಚಿರತೆ ಕೊಂದು ತಿಂದು ಹಾಕಿರುವ ಘಟನೆ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ಚಿಕ್ಕ ಚೆಂಗಾವಿ ಗ್ರಾಮದಲ್ಲಿ ನಡೆದಿದೆ.
ಚೆಂಗಾವಿ ಗ್ರಾಮದ ರೈತ ಮುಖಂಡ ಪ್ರಕಾಶ್ ಎಂಬುವರ ತೋಟದ ಮನೆಯಲ್ಲಿ ಕಟ್ಟಿ ಹಾಕಿದ್ದ ಟಗರನ್ನು ಶನಿವಾರ ತಡ ರಾತ್ರಿ ಚಿರತೆ ದಾಳಿ ನಡೆಸಿ ಕೊಂದು ಹಾಕಿದ್ದು, ಕುತ್ತಿಗೆಯಿಂದ ಮೇಲ್ಭಾಗ ಹಗ್ಗದಲ್ಲೇ ಉಳಿದಿದ್ದರೆ, ದೇಹದ ಭಾಗವನ್ನು ಚಿರತೆ ಹೊತ್ತೊಯ್ದು ತಿಂದು ಹಾಕಿದೆ.
ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಥಳೀಯರು, ಈ ಭಾಗದಲ್ಲಿ ಸಾಕಷ್ಟು ಬಾರಿ ಚಿರತೆಗಳು ದಾಳಿ ನಡೆಸಿದ್ದರೂ ಅರಣ್ಯ ಇಲಾಖೆ ಕ್ರಮವಹಿಸುತ್ತಿಲ್ಲ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆ ಚಿರತೆಗಳನ್ನು ಹಿಡಿಯಲು ಬೋನುಗಳನ್ನಿಡಬೇಕು. ಈ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಚಿರತೆಗಳು ನಿರಂತರವಾಗಿ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಚಿರತೆಗಳನ್ನು ಸೆರೆ ಹಿಡಿಯದೇ ನಿರ್ಲಕ್ಷಿಸುತ್ತಿದೆ. ಅಧಿಕಾರಿಗಳು, ಇನ್ನೂ ಈ ಬಗ್ಗೆ ಕ್ರಮಕೈಗೊಳ್ಳದಿದ್ದರೆ, ಅರಣ್ಯ ಇಲಾಖೆ ಎದುರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz