ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ಅವರಿಗೆ ‘ಕನ್ನಡ ಕಲಾಭೂಷಣ’ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗಿದೆ. ಸಿನಿಮಾರಂಗದಲ್ಲಿ ಅವರ ಸೇವೆಯನ್ನು ಪರಿಗಣಿಸಿ ಕನ್ನಡ ಗೆಳೆಯರ ಬಳಗ ಸಮಿತಿ ಈ ಪ್ರಶಸ್ತಿ ಪ್ರದಾನ ಮಾಡಿದೆ. ಚಿರು ಸಹೋದರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದ್ದ ಚಿರು 2020ರ ಜೂನ್ 7ರಂದು ಹೃದಯಾಘಾತದಿಂದ ನಿಧನರಾಗಿದ್ದರು.
ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರವಾಗಿ ನೀಡಲಾದ ಪ್ರಶಸ್ತಿಯನ್ನು ಸಹೋದರ ಹಾಗೂ ನಟ ಧ್ರುವ ಸರ್ಜಾ ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು.ಪ್ರಶಸ್ತಿ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು. ಇನ್ನು ಸಂಸದರಾದ ತೇಜಸ್ವಿ ಸೂರ್ಯ, ಡಿಕೆ ಸುರೇಶ್ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy