ಚಿತ್ರದುರ್ಗ/ಹಿರಿಯೂರು: ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯ್ದೆಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಬುಧವಾರ ಹಿರಿಯೂರು ತಾಲ್ಲೂಕಿನ ವಕೀಲರ ಸಂಘದ ಅಧ್ಯಕ್ಷರಾದ ಎನ್.ವಿ.ಅನಿಲ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಹಿರಿಯೂರು ತಾಲ್ಲೂಕಿನ ತಹಶೀಲ್ದಾರರಿಗೆ ಹಾಗೂ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶಿವು ಯಾದವ್ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಿಗೆ ವಕೀಲರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಈ ತಿದ್ದುಪಡಿಯು ಅಸಂವಿಧಾನಿಕ ಹಾಗೂ ಕಾನೂನು ಬಾಹಿರವಾಗಿರುವುದರಿಂದ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ತಕ್ಷಣವೇ ಈ ತಿದ್ದುಪಡಿಯನ್ನು ಹಿಂಪಡೆದು ಸಿವಿಲ್ ನ್ಯಾಯಾಲಯಕ್ಕೆ ಇರುವ ಅಧಿಕಾರವನ್ನುಉಳಿಸಬೇಕು ಎಂದು ಒತ್ತಾಯಿಸಿದರಲ್ಲದೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಚಿತ್ರದುರ್ಗ ಜಿಲ್ಲೆಯ ನ್ಯಾಯಾಲಯದ ಆವರಣದಿಂದ ಮೆರವಣಿಗೆ ಮೂಲಕ ಸಾಗಿದ ವಕೀಲರು ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿದರು. ಬಳಿಕ ತಾಲ್ಲೂಕು ಕಛೇರಿ ಮುಂಭಾಗದ ರಸ್ತೆಯಿಂದ ಒನಕ್ಕೆ ಓಬವ್ವ ವೃತ್ತಕ್ಕೆಆಗಮಿಸಿ ಮಾನವ ಸರಪಳೆ ನಿರ್ಮಿಸಿ ರಾಜ್ಯ ಸರ್ಕಾರದ ಗಮನ ಸೆಳೆದರು.
ಹಿರಿಯೂರಿನಲ್ಲೂ ವಕೀಲರಿಂದ ಪ್ರತಿಭಟನೆ:
ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯ್ದೆಗೆ ಹಿರಿಯೂರಿನಲ್ಲೂ ವಿರೋಧ ವ್ಯಕ್ತವಾಗಿದ್ದು, ಈ ಸಂಬಂಧ ನಮ್ಮತುಮಕೂರು ಮಾಧ್ಯಮದ ಜೊತೆಗೆ ಮಾತನಾಡಿದ ಹಿರಿಯೂರು ತಾಲ್ಲೂಕಿನ ವಕೀಲರ ಸಂಘದ ಅಧ್ಯಕ್ಷರಾದ ಎನ್ ವಿ ಅನಿಲ್ ಕುಮಾರ್, ಹಾಗೂ ಕರ್ನಾಟಕ ಸರ್ಕಾರ ಕಳೆದ 18ರಂದು ಜನನ ಮತ್ತು ಮರಣ ನೋಂದಣಿ ಕಾಯ್ದೆಯನ್ನು ತಿದ್ದುಪಡಿಗೊಳಿಸಿ, ಜನನ ಮತ್ತು ಮರಣ ನೋಂದಣಿ ಪ್ರಕರಣಗಳ ಅಧಿಕಾರ ವ್ಯಾಪ್ತಿಯನ್ನು ಸಿವಿಲ್ ನ್ಯಾಯಾಲಯದಿಂದ ಉಪವಿಭಾಗ ಅಧಿಕಾರಿಗಳ ನ್ಯಾಯಾಂಗಕ್ಕೆ ವರ್ಗಾಯಿಸಿರುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗಲಿದೆ ಎಂದು ದೂರಿದರು.
ಈ ತಿದ್ದುಪಡಿ ಅಸಂವಿಧಾನಿಕ ಹಾಗೂ ಕಾನೂನು ಬಾಹಿರವಾಗಿರುವುದರಿಂದ ಸಾರ್ವಜನಿಕರ ಹಿತಾಶಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ತಕ್ಷಣವೇ ಈ ತಿದ್ದುಪಡಿಯನ್ನು ಹಿಂಪಡೆದು ಸಿವಿಲ್ ನ್ಯಾಯಾಲಯಕ್ಕೆ ಇರುವ ಅಧಿಕಾರವನ್ನು ಮುಂದುವರೆಸುವಂತೆ ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರತಿಭಟನಾ ನಿರತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶಿವು ಯಾದವ್ ಹಾಗೂ ಉಪಾಧ್ಯಕ್ಷರಾದ ಜಿ.ಸಿ.ದಯಾನಂದ, ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಹಿರಿಯೂರು ತಾಲ್ಲೂಕಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿರಿಯೂರು ತಾಲ್ಲೂಕಿನ ವಕೀಲರ ಸಂಘದ ಅಧ್ಯಕ್ಷರಾದ ಎನ್.ವಿ.ಅನಿಲ್ ಕುಮಾರ್ ಹಾಗೂ ಉಪಾಧ್ಯಕ್ಷರಾದ ಎಂ.ಆರ್. ರಂಗಸ್ವಾಮಿ ಅವರು ಹಿರಿಯೂರು ತಾಲ್ಲೂಕಿನ ತಾಲ್ಲೂಕು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು ಸಹ ಉಪಸ್ಥಿತರಿದ್ದರು
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


