ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯಲ್ಲಿರುವ ಪರಿಶಿಷ್ಠ ಜಾತಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಓಂ ಶೆಕ್ಯೂರಿಟಿ ಸರ್ವಿಸಸ್ ಹಾಗೂ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಅಸ್ಪೃಶ್ಯತೆ ಆಚರಣೆಗೆ ಬೆಂಬಲಿಸುತ್ತಿದ್ದಾರೆ, ಇವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.
ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಮಾಡಿರುವ ಅಂಬೇಡ್ಕರ್ ಸ್ವಾಭಿಮಾನಿ ಸೇನೆ, ಆಸ್ಪೃಶ್ಯತೆ ಆಚರಣೆ ಕುಮ್ಮುಕ್ಕು ನೀಡುತ್ತಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರನ್ನು ಸೇವೆಯಿಂದ ವಜಾಗೊಳಿಸಬೇಕು, ಮುರಾರ್ಜಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸಮಾಜ ಕಲ್ಯಾಣ ಇಲಾಖೆ ವಿಫಲವಾಗಿದ್ದು , ರೂಪ ಬಿ. ಅವರನ್ನು ಚಿತ್ರಹಳ್ಳಿ ವಸತಿ ಶಾಲೆಗೆ ಡಿ ಗ್ರೂಪ್ ಜವಾನರ ಹುದ್ದೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದೆ.
ಮೂರು – ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿರುವ ಶ್ರಮ ಜೀವಿಗಳನ್ನು ಖಾಯಂಗೊಳಿಸಿ ಹಾಗೂ ಇವರುಗಳಿಗೆ ತಿಂಗಳ ವೇತನವು ಸಹ ನೇರವಾಗಿ ಅವರ ಕೈ ಸೇರುವಂತೆ ಸಮಾಜ ಕಲ್ಯಾಣ ಇಲಾಖೆ ಕ್ರಮ ಕೈಗೊಳ್ಳಬೇಕು . ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಸ್ಥಾಪಕರು ಹಾಗೂ ರಾಜ್ಯಾದ್ಯಕ್ಷರಾದ ಡಾ.ಆರ್.ಕೋದಂಡರಾಮ್ ನೇತೃತ್ವದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಪ್ರತಿಭಟನಾಕಾರರು ಇದೇ ವೇಳೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧ್ಯಕ್ಷರಾದ ರಾಮಚಂದ್ರ.ಕೆ ಮತ್ತು ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಿ.ಎಮ್., ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೃಷಬೇಂದ್ರಬಾಬು ಬಿ.ಎಸ್. ಜಿಲ್ಲಾ ಯುವ ಘಟಕದ ಗೌರವ ಅಧ್ಯಕ್ಷರಾದ ಬಸವರಾಜ್(ಕುರುಬರಹಳ್ಳಿ), ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ರೇವಣ್ಣಸಿದ್ದಪ್ಪ ಬಿ.(ಕಲ್ಕುಂಟೆ)ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಣ್ಣ , ಜಿಲ್ಲಾ ಯುವ ಘಟಕದ ಕಾರ್ಯಾಧ್ಯಕ್ಷರಾದ ವಸಂತ ಕುಮಾರ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ತಿಪ್ಪೇಶ್ ಹೊಳಲ್ಕೆರೆ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಯತೀಶ್, ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ವಿ., ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್., ಹಿರಿಯೂರು ಅಲ್ಪಸಂಖ್ಯಾತರ ಘಟಕದ ತಾಲ್ಲೂಕು ಗೌರವ ಅಧ್ಯಕ್ಷರಾದ ಮುಬಾರಕ್(ಪೀಲ್ಟು) ಹಿರಿಯೂರು ತಾಲ್ಲೂಕು ಉಸ್ತುವಾರಿಗಳಾದ ಗಿರೀಶ್ ಶೇಷಪ್ಪನ ಹಳ್ಳಿ ಗ್ರಾಮ ಶಾಖೆ ಅಧ್ಯಕ್ಷರಾದ ವರದರಾಜ್ ಹಾಗೂ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದರು.
ವರದಿ: ಮುರುಳಿಧರನ್ ಆರ್ ., ಹಿರಿಯೂರು ( ಚಿತ್ರದುರ್ಗ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy