ಚಿತ್ರದುರ್ಗ: ಜಿಲ್ಲಾ ಮೂರನೇಯ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ನ್ಯಾಯಾಧೀಶರಾಗಿ ನೇಮಕಗೊಂಡಿರುವ ನ್ಯಾಯಾಧೀಶರಾದ ಸಹನಾ ಅವರನ್ನು ಜಿಲ್ಲಾ ವಕೀಲರ ಸಂಘದಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸಿ.ಶಿವು ಯಾದವ್, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹಲವು ವರ್ಷಗಳಿಂದ ನ್ಯಾಯಾಧೀಶರು ನೇಮಕಗೊಂಡಿರಲಿಲ್ಲ.
ಇದೀಗ ಸಹನಾರವರು ನ್ಯಾಯಾಧೀಶರಾಗಿ ಆಗಮಿಸಿರುವುದು ತುಂಬಾ ಸಂತೋಷದಾಯಕ ವಿಷಯವಾಗಿದೆ. ಅವರ ನ್ಯಾಯಾಧೀಶರ ವೃತ್ತಿಜೀವನವು ಚಿತ್ರದುರ್ಗದಿಂದ ಆರಂಭಿಸುತ್ತಿದ್ದಾರೆ. ಅವರ ಮುಂದಿನ ನ್ಯಾಯಾಧೀಶರ ವೃತ್ತಿಜೀವನವು ಸುಂದರವಾಗಿರಲಿ ಎಂದು ಹಾರೈಸಿದರು.
ನ್ಯಾಯಾಧೀಶರಾದ ಸಹನರವರಿಗೆ ನ್ಯಾಯದಾನ ವಿಚಾರದಲ್ಲಿ ಎಲ್ಲಾ ರೀತಿಯಿಂದಲೂ ವಕೀಲರ ಸಂಘದಿಂದ ಸಹಕಾರ ನೀಡಲಾಗುವುದು. ತ್ವರಿತ ನ್ಯಾಯದಾನದಲ್ಲಿ ನ್ಯಾಯಾಧೀಶರ ಮತ್ತು ವಕೀಲರ ಪರಸ್ಪರ ಸಹಕಾರ ಅತ್ಯವಶ್ಯಕವಾಗಿರುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪ್ರೇಮವತಿ ಮನಗೂಳಿ ಅವರು ಮಾತನಾಡಿ, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಸಹನಾರವರನ್ನು ನೇಮಕ ಮಾಡಿರುವುದು ಸಂತೋಷದಾಯಕ ವಿಷಯವಾಗಿದೆ. ತಮ್ಮ ಕೆಲಸ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಲಿ ನ್ಯಾಯಾಂಗದಿಂದ ಎಲ್ಲಾ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಈ ಸಮಾರಂಭದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಕಲ್ಕಣಿಯವರು, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆಂಪರಾಜುರವರು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಕೆ.ಗಿರೀಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಮೂರ್ತಿ, ಸಹ ಕಾರ್ಯದರ್ಶಿ ವಿಶ್ವನಾಥ್ ರೆಡ್ಡಿ, ಖಜಾಂಚಿ ಅಜ್ಜಯ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy