ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಳ್ಳಕೆರೆ ತಾಲೂಕಿನ ಗುಂತಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ. ಈತ ತನ್ನ ಜಮೀನಿನಲ್ಲಿ ಗುಟ್ಟಾಗಿ ಗಾಂಜಾ ಗಿಡಗಳನ್ನು ಬೆಳೆಸುತ್ತಿದ್ದನು. ಖಚಿತ ಮಾಹಿತಿ ಮೆರೆಗೆ ನಾಯಕನಹಟ್ಟಿ ಪೊಲೀಸರು ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ.
ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ಸುಮಾರು 18 ಲಕ್ಷ ರೂಪಾಯಿ ಮೌಲ್ಯದ 791 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 187 ಕೆ.ಜಿ. ತೂಕದ ಗಾಂಜಾ ಸೊಪ್ಪನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಹಾಗೂ ಚಳ್ಳಕೆರೆ ಉಪ ಡಿವೈಎಸ್ಪಿ ಸತ್ಯನಾರಾಯಣ ರಾವ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ತಳಕು ಪೊಲೀಸ್ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ. ಶಿರೇಹಳ್ಳಿ ಹಾಗೂ ನಾಯಕನಹಟ್ಟಿ ಪೊಲೀಸ್ ಪಿಎಸ್‌ಐ ಜಿ. ಪಾಂಡುರಂಗಪ್ಪ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.
ದಾಳಿಯ ಸಂದರ್ಭದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಕೂಡ ಭಾಗಿಯಾಗಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


