ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಥಳಿಸಿ ಕೈ ಮುರಿದಿರುವ ಘಟನೆ ನಡೆದಿದೆ.
8ನೇ ತರಗತಿ ವಿದ್ಯಾರ್ಥಿ ಅಮೃತ್ ಕೈಗೆ ಗಂಭೀರ ಗಾಯವಾಗಿದೆ. ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಕಾರಣಕ್ಕೆ ಶಿಕ್ಷಕ ಸಿದ್ದರಾಜು ಸ್ಟೀಲ್ ಸ್ಕೇಲ್ನಿಂದ ಹೊಡೆದಿದ್ದಾನೆ. ಇದರಿಂದ ಅಮೃತ್ ಕೈ ಕಟ್ ಆಗಿದೆ.
ಇದನ್ನು ಕಂಡ ಶಿಕ್ಷಕ ಸಿದ್ದರಾಜು, ಆತನ ಪೋಷಕರಿಗೆ ಕಟರ್ನಿಂದ ಅಮೃತ್ ಕೈಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ತಾಲೂಕು ಶಿಕ್ಷಣಾಧಿಕಾರಿ ಉದಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


