ತೆಲಂಗಾಣದ ವಾರಂಗಲ್‌ನಲ್ಲಿ ಚಾಕ್ಲೇಟ್ ತಿನ್ನುವಾಗ ಉಸಿರುಗಟ್ಟಿ 9 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಬಾಲಕನನ್ನು ಸಂದೀಪ್ ಸಿಂಗ್ ಎಂದು ಗುರುತಿಸಲಾಗಿದೆ.
ಚಾಕ್ಲೇಟ್ ತಿನ್ನುತ್ತಿದ್ದಾಗ ಗಂಟಲಿನಲ್ಲಿ ಸಿಕ್ಕಿಕೊಂಡಿದೆ. ಬಳಿಕ ಆತನನ್ನು ವಾರಂಗಲ್‌ನ ಎಂಜಿಎಂ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ಆತ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಬಾಲಕ ನಗರದ ಶಾರದಾ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು, 2ನೇ ತರಗತಿಯಲ್ಲಿ ಓದುತ್ತಿದ್ದ. ತಂದೆ ಆಸ್ಟ್ರೇಲಿಯಾದಿಂದ ಚಾಕ್ಲೇಟ್ ತಂದಿದ್ದು, ಅದನ್ನು ಶಾಲೆಗೆ ಒಯ್ದಿದ್ದ. ಶಾಲೆಯಲ್ಲಿ ಚಾಕ್ಲೇಟ್ ಅನ್ನು ತಿನ್ನುತ್ತಿದ್ದ ವೇಳೆ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಬಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಶಾಲೆಯ ಆಡಳಿತ ಮಂಡಳಿ ಬಾಲಕನ ಪೋಷಕರಿಗೆ ಮಾಹಿತಿ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


