ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕಾಲರಾದಿಂದ ಐದು ಜನರು ಸಾವನ್ನಪ್ಪಿದ್ದು, 181 ರೋಗಿಗಳು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಮೃತಪಟ್ಟವರಾಗಿದ್ದು, ಈ ರೋಗಿಗಳಲ್ಲಿ ಮೂವರು 24 ರಿಂದ 40 ವರ್ಷ ವಯಸ್ಸಿನವರು ಮತ್ತು ಇಬ್ಬರು 70 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ತಿಳಿದು ಬಂದಿದೆ.
ಜುಲೈ 7 ರಂದು ಅಮರಾವತಿ ಜಿಲ್ಲೆಯ ಚಿಖಲ್ದಾರ ಮತ್ತು ಅಮರಾವತಿ ಬ್ಲಾಕ್ ಗಳಲ್ಲಿ ಏಕಾಏಕಿ ಕಾಲರ ಹರಡಿದೆ. ಸಾಂಕ್ರಾಮಿಕ ಪೀಡಿತ ಗ್ರಾಮಗಳಲ್ಲಿ ವೈದ್ಯಕೀಯ ತಂಡಗಳು ಹಗಲಿರುಳು ಕಾರ್ಯನಿರ್ವಹಿಸುತ್ತಿದೆ.
ನೀರಿನಲ್ಲಿ ಕಾಲರ ಹರಡುವ ಹಿನ್ನೆಲೆಯಲ್ಲಿ ನೀರಿನ ಗುಣಮಟ್ಟದ ಮೇಲ್ವಿಚಾರಣೆ, ರೋಗಿಗಳ ಕಣ್ಗಾವಲು, ನಿರ್ವಹಣೆ ಮತ್ತು ಚಿಕಿತ್ಸೆ ಮತ್ತು ಆರೋಗ್ಯ ಜಾಗೃತಿಗೆ ಸಂಬಂಧಿಸಿದಂತೆ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz