ಬೆಂಗಳೂರಿನಲ್ಲಿ ಹೊಸ ವರ್ಷ ಮತ್ತು ಕ್ರಿಸ್‌ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿಯನ್ನುಕಡ್ಡಾಯಗೊಳಿಸಲಾಗಿದೆ.
ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್ ರೆಡ್ಡಿ ಈ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷ ಮತ್ತು ಕ್ರಿಸ್‌ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿ ಕಡ್ಡಾಯವಾಗಿದೆ.
ಸಂಘಟಕರು, ಅನುಮತಿಗಳಿಗಾಗಿ ಅರ್ಜಿ ಸಲ್ಲಿಸುವಾಗ, ಅವರು ಹೋಸ್ಟ್ ಮಾಡುವ ಈವೆಂಟ್‌ಗಳ ಪ್ರಕಾರದ ಬಗ್ಗೆ ವಿವರವಾಗಿ ವಿವರಿಸಬೇಕು. ಅನುಮತಿ ಇಲ್ಲದ ಪಾರ್ಟಿಗಳಿಗೆ ಆಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಸೂಚನೆ ನೀಡಿದ್ದಾರೆ.
ತಪಾಸಣೆ, ಪರವಾನಗಿ ಪಡೆಯದಿರುವ ಶಸ್ತ್ರಾಸ್ತ್ರಗಳ ಮೇಲೆ ನಿಷೇಧ, ಹೈ ರೆಸಲ್ಯೂಶನ್ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ವಿದ್ಯುತ್ ಬ್ಯಾಕಪ್, ಸಾಕಷ್ಟು ಬೆಳಕು, ಭದ್ರತಾ ಸಿಬ್ಬಂದಿ ನೇಮಕ ಕುರಿತು ನಿರ್ದೇಶನ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy