ನಾಗಾಲ್ಯಾಂಡ್: ಚುನಾವಣಾ ಕರ್ತವ್ಯದ ನಿಮಿತ್ತ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಭಾನುವಾರ ಮಧ್ಯಾಹ್ನ ನಾಗಾಲ್ಯಾಂಡ್‌ನ ವೋಖಾದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ.
ವೋಖಾ ಜಿಲ್ಲೆಯ ಡೊವಾಂಗ್ ಜಲವಿದ್ಯುತ್ ಯೋಜನೆಯ ಬಳಿ ಮತಗಟ್ಟೆ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿದೆ. ಮತದಾನ ಕೇಂದ್ರದಿಂದ ಹತ್ತು ನಿಮಿಷಗಳ ಅಂತರದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಸ್ ಚಾಲಕ ಸಾವನ್ನಪ್ಪಿದ್ದಾನೆ ಗಾಯಗೊಂಡ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದಿಮಾಪುರಕ್ಕೆ ವಿಮಾನದಲ್ಲಿ ರವಾನಿಸಲಾಗಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


