ಪಾವಗಡ: ಪಾವಗಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹೆಚ್ ವಿ ವೆಂಕಟೇಶ್ ಅವರು ಆಯೋಜಿಸಲಾಗಿದ್ದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ಪ್ರಮುಖ ನಾಯಕರ ದಂಡೇ ಹರಿದು ಬಂದಿತ್ತು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ರವರ ಪರವಾಗಿ ಪಾವಗಡ ತಾಲೂಕಿನ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳ ಬಳಿ ಮತ ಯಾಚಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್ ರವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಸ್ಥಳೀಯ ಶಾಸಕ ವೆಂಕಟರಮಣಪ್ಪ, ಅಭ್ಯರ್ಥಿ ಆರ್.ರಾಜೇಂದ್ರ, ಮಾಜಿ ಶಾಸಕ ಕ .ಎನ್.ರಾಜಣ್ಣ, ಮಾಜಿ ಶಾಸಕ ಕೆ.ಷಡಕ್ಷರಿ, ಮಾಜಿ ಶಾಸಕ ಶಫಿ ಅಹ್ಮದ್ , ಮಾಜಿ ಸಂಸದರುಗಳಾದ ಮುದ್ದ ಹನುಮೇಗೌಡರು, ಬಿ.ಎನ್.ಚಂದ್ರಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ ಹುಲಿಕುಂಟೆ ಮಠ್, ಪಾವಗಡ ನಗರ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು, ಮಾಜಿ ಶಾಸಕ ಸೋಮ್ಲಾ ನಾಯ್ಕ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣಯ್ಯ, ಸ್ಥಳೀಯ ಜನಪ್ರತಿನಿಧಿಗಳಾದ, ತಾಳೆ ಮರದಹಳ್ಳಿ ನರಸಿಂಹಯ್ಯ, ಮಾಜಿ ಜಿ.ಪಂ. ಸದಸ್ಯರುಗಳು, ಮಾಜಿ ತಾ.ಪಂ ಸದಸ್ಯರುಗಳು, ಎಪಿಎಂಸಿ ಅಧ್ಯಕ್ಷರುಗಳು, ಸದಸ್ಯರುಗಳು, ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಯುವ ಕಾಂಗ್ರೆಸ್ ಸದಸ್ಯರು ಮತ್ತಿತರರು ಇದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700