ಬೀದರ್ : ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಡಿಸೆಂಬರ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಸೂಚಿಸುತ್ತದೆ. ನಾವು ಬಲವಾದ ನೆಲೆಯನ್ನು ಹೊಂದಿರುವ 134 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ’ ಎಂದು ತಿಳಿಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಬೀದರ್ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಇನ್ನೂ 10 ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz