ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ 2019ರಲ್ಲಿ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಜ್ವಾನ್ ಅರ್ಷದ್ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
2019ರ ಏಪ್ರಿಲ್ 13ರಂದು ‘ದೊಡ್ಡನೆಕ್ಕುಂದಿ ಗ್ರಾಮದ ಕೋದಂಡರಾಮ ಸರ್ಕಲ್ ದೇವಾಲಯದಲ್ಲಿ ನಡೆಯುತ್ತಿದ್ದ ಶ್ರೀರಾಮನವಮಿ ಪಲ್ಲಕ್ಕಿ ಉತ್ಸವದ ವೇಳೆ ಅನುಮತಿ ಪಡೆಯದೆ ರಿಜ್ವಾನ್ ಅರ್ಷದ್ ಚುನಾವಣಾ ಪ್ರಚಾರದ ಅಂಗವಾಗಿ ರೋಡ್ ಶೋ ನಡೆಸಿದರು’ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು.
ಈ ಕುರಿತು ಮೆಯೊಹಾಲ್ ಕೋರ್ಟ್ ಸಂಖ್ಯೆ 43ರಲ್ಲಿ ದಾಖಲಾಗಿರುವ ಎಫ್‌ಐಆರ್ ಮಮತ್ತು ವಿಚಾರಣೆ ರದ್ದುಗೊಳಿಸಬೇಕು ಎಂದು ಕೋರಿ ರಿಜ್ವಾನ್ ಅರ್ಷದ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ಎಸ್.ಎ. ಅಹಮದ್ ಅವರು, ‘ಕಾನೂನುಬಾಹಿರವಾಗಿ ದಾಖಲಾಗಿರುವ ಈ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.ಆದರೆ ಈ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


