ನವದೆಹಲಿ: ರಾಜ್ಯದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆ ಸಿದ್ಧತೆಗಾಗಿ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದಲೇ ರಾಜ್ಯಕ್ಕೆ ‘ ಚುನಾವಣಾ ಸಿದ್ಧತಾ ತಂಡ ಕಳುಹಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ರಾಜ್ಯ ಕಾಂಗ್ರೆಸ್‌ನಾಯಕರಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ .
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಶಮನಗೊಳಿಸುವ ಹಾಗೂ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಶತಾಯ ಗತಾಯ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಗುರುವಾರ ರಾಹುಲ್ ಗಾಂಧಿ ಅವರು ದೆಹಲಿಯ ತಮ ನಿವಾಸದಲ್ಲಿ ರಾಜ್ಯ ನಾಯಕರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು .
ಈ ವೇಳೆ ಮುಂಬರುವ ಚುನಾ ವಣೆ ದೃಷ್ಟಿಯಿಂದ ಅಧ್ಯಯನ ನಡೆಸಲು , ರಣತಂತ್ರ ರೂಪಿಸಲು ಹಾಗೂ ಚುನಾವಣೆಯಲ್ಲಿ ಗೆಲ್ಲಲು ಕೈಗೊ ಳ್ಳಬೇಕಾದ ಕ್ರಮಗಳ ಕುರಿತು ಕೆಪಿಸಿಸಿ , ಎಐಸಿಸಿಗೆ ಸಲಹೆ ನೀಡಲು ಅನುವಾಗುವಂತೆ ಚುನಾವಣಾ ಸಿದ್ಧತಾ ತಂಡ ರಚನೆಯಾಗಲಿದೆ .
ಈ ತಂಡ ಕಾಲ ಕಾಲಕ್ಕೆ ರಾಜ್ಯಕ್ಕೆ ಭೇಟಿ ನೀಡಿ ಬಿಜೆಪಿ ಸರ್ಕಾರದ ವಿರುದ್ಧದ ಯಾವೆಲ್ಲ ವಿಷಯಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಬೇಕು ಎಂಬ ಬಗ್ಗೆ ವರದಿ ನೀಡಲಿದೆ ಎಂದು ತಿಳಿದು ಬಂದಿದೆ .
ರಾಜ್ಯ ಕಾಂಗ್ರೆಸ್ ನಾಯಕರಲ್ಲಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲೆಂದು ಕರೆದಿದ್ದ ಸಭೆಯಲ್ಲಿ ರಾಹುಲ್ ಗಾಂಧಿಯವರು ಈ ವಿಚಾರ ಎತ್ತುವ ಮೊದಲೇ ‘ ನಾವೆಲ್ಲ ಒಟ್ಟಾಗಿದ್ದೇವೆ ‘ ಎಂದು ರಾಜ್ಯ ನಾಯಕರು ಸ್ವಯಂ ಘೋಷಿಸಿಕೊಂಡಿದ್ದಾರೆ .
ನವದೆಹಲಿಯಲ್ಲಿ ಗುರುವಾರ ರಾಜ್ಯ ಕಾಂಗ್ರೆಸ್ ನಾಯಕರ ಜತೆ ರಾಹುಲ್ ಗಾಂಧಿ ಅವರು ಸಭೆಯಲ್ಲಿ ಪದಾಧಿಕಾರಿಗಳ ನೇಮಕ ಮಾಡಲಾಗಿತ್ತು.
2 ವರ್ಷಗಳಿಂದ ನನೆಗುದಿಗೆಗೆ ಜಿದ್ದಿರುವ ಕೆಪಿಸಿಸಿ ಪದಾಧಿಕಾರಿಗಳ ನೇಮಕಕ್ಕೆ ಕೊನೆಗೂ ಕಾಂಗ್ರೆಸ್ ಮುಷ್ಟ ರಾಹುಲ್‌ಗಾಂಧಿ ಹಸಿರು ನಿಶಾನೆ ತೋರಿದ್ದಾರೆ .
ಕೂಡಲೇ ಪದಾಧಿಕಾರಿಗಳ ನೇಮಕ ಮಾಡುವಂತೆ ನಿರ್ದೇಶನ ನೀಡಿದ್ದಾರೆ , ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿ ಕೊಂಡ ಬಳಿಕ ವಿವಿಧ ಪದಾಧಿಕಾರಿಗಳ ಹುದ್ದೆಗೆ ನೇಮಕ ನಡೆಯಬೇಕಿತ್ತು .
ಈ ಸಂದರ್ಭದಲ್ಲಿ ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಸಭೆ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಧ್ರುವ ನಾರಾಯಣ,ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್, ವಿಧಾನ ಸಭೆ ಉಪ ನಾಯಕರಾದ ಯು.ಟಿ. ಖಾದರ್, ಸಿ.ಡಬ್ಲು.ಸಿ. ಸದಸ್ಯರಾದ ಕೆ.ಎಚ್.ಮುನಿಯಪ್ಪ, ಎಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ಕೆ.ಜೆ. ಜಾರ್ಜ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್, ಹಿರಿಯೂರು . ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB