ಬೆಂಗಳೂರು: ಚರ್ಚ್ ಸ್ಪೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗೆ, ಕರ್ನಾಟಕ ಹೈಕೋರ್ಟ್ ಎರಡು ವಾರಗಳ ಜಾಮೀನು ಮಂಜೂರು ಮಾಡಿದೆ.
ಅಖಿಲ್ ಜುಲೈ 2000 ದಲ್ಲಿ ಬೆಂಗಳೂರಿನಲ್ಲಿ ನಡೆದ ಚರ್ಚ್ ಸ್ಪೋಟ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾಗಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಗೋವಾದಲ್ಲಿ ಉಂಟಾದ ಸ್ಪೋಟಗಳಲ್ಲಿ ದೀನದರ್ ಅಂಜುಮನ್ ಪಂಥಕ್ಕೆ ಸೇರಿದ 24 ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ. ಜೀವಾವಧಿ ಶಿಕ್ಷೆಗೆ ಗುರಿಯಾದ 13 ಮಂದಿಯಲ್ಲಿ ಅಖಿಲ್ ಕೂಡ ಒಬ್ಬ.


