ಬೆಂಗಳೂರು: 545 ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣವನ್ನು ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದ್ದು, ಅದಕ್ಕೆ ಮುಕ್ತ ಅಧಿಕಾರ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಜಿಎಂಐಟಿ ಕಾಲೇಜಿನ ಆವರಣದಲ್ಲಿರುವ ಹೆಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರು, ಯಾವ ಮಟ್ಟದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ಯಾವುದೇ ಪಕ್ಷದವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರ, ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಸೂಪರ್ ವೈಸರ್ ಗಳನ್ನು ಪತ್ತೆ ಹಚ್ಚಿ ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡಲಾಗುವುದು. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಯಾರು, ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಈ ವೇಳೆ ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಚನ್ನಪ್ಪ, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ, ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಎಸ್ಪಿ ಸಿ.ಬಿ.ರಿಷ್ಯಂತ್ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


