ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಕ್ರೈಂ ಮತ್ತು ಹಾರರ್ ಸಿನಿಮಾಗಳ ಮಾದರಿಯಲ್ಲಿ ಕೊಲೆ, ಸೂಲಿಗೆಗಳು ನಡೆಯುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಇದೇ ಮಾದರಿಯಲ್ಲಿ ರಾಜಧಾನಿಯ ಅಕ್ಷಯನಗರದಲ್ಲಿ ಒಂದು ಘಟನೆ ನಡೆದಿದ್ದು ಮಲಯಾಳಂ ಕೋಲ್ಡ್ ಕೇಸ್ ಸಿನಿಮಾದಲ್ಲಿ ತೋರಿಸುವ ರೀಲ್ ಕಥೆ ಇಲ್ಲಿ ರಿಯಲ್ ಆಗಿದೆ.
ಬೆಂಗಳೂರಿನ ಅಕ್ಷಯನಗರದ ಹುಳಿಮಾವು ಮರವೊಂದರ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಅವಶೇಷಗಳು ಪತ್ತೆಯಾಗಿವೆ. ಮರದ ಕೊಂಬೆಯಲ್ಲಿ ನೇತಾಡುತಿದ್ದ ತಲೆ ಬುರುಡೆ ಪತ್ತೆಯಾಗಿದ್ದು ಶವ 6 ತಿಂಗಳಿಂದ ಕೊಳೆಯುತ್ತಿತ್ತು. ಫೆ.2 ರಂದು ಪೊಲೀಸರು ಮೂತ್ರ ವಿಸರ್ಜನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ಬೆಳಗ್ಗೆ ನಮಗೆ ಮಾನವನ ಅಸ್ತಿಪಂಜರ ಇರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ವೇಳೆ ಮಹಿಳೆಯ ಚಪ್ಪಲಿ, ಅಲ್ಲದೆ ಕುತ್ತಿಗೆ ಬಳಸುವ ನೆಕ್ಲೆಸ್ ಎಲ್ಲವೂ ಪತ್ತೆಯಾಗಿತ್ತು. ಹೀಗಾಗಿ ನಾವು ಮಿಸ್ಸಿಂಗ್ ಕೇಸ್ ಗಳನ್ನ ಹುಡುಕಲು ಶುರುಮಾಡಿದ್ವಿ. ನಾವು ಕಳೆದ ವರ್ಷ ಜುಲೈನಲ್ಲಿ ಹುಳಿಮಾವು ಠಾಣೆಯಲ್ಲಿ ನೇಪಾಳಿ ಮಹಿಳೆ ನಾಪತ್ತೆ ಕೇಸ್ ದಾಖಲಾಗಿತ್ತು. ಈಗ ಅಲ್ಲಿ ಸಿಕ್ಕಿರುವ ವಸ್ತುಗಳು ಎಲ್ಲ ವಸ್ತುಗಳು ಮ್ಯಾಚ್ ಮಾಡಲಾಗಿದ್ದು ಮಹಿಳೆಯದೆ ಶವ ಎಂಬುದು ಗೊತ್ತಾಗಿದೆ. ಆದರೂ ನಾವು ಅಸ್ಥಿಪಂಜರದ ಡಿಎನ್ಎ, ಸತ್ತ ಅವಧಿಯ ಬಗ್ಗೆ ಮಾಹಿತಿ ಎಲ್ಲವನ್ನು ಪಡೆದುಕೊಳ್ಳಲಿದ್ದೇವೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಹೇಳಿಕೆ ನೀಡಿದ್ದಾರೆ.
ವರದಿ : ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


